ಬೆಂಗಳೂರು: ನಕಲಿ ಬಂಗಾರ ಅಡಮಾನ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (DCC BANK) ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರಿಗೆ ಸೇರಿದ 13.91 ಕೋಟಿ ರೂ. ಮೊತ್ತದ ಸ್ಥಿರ ಮತ್ತು ಚರ ಆಸ್ತಿಯನ್ನು (Properties) ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಅಕ್ರಮ ಹಣ ವರ್ಗಾವಣೆ ಕಾಯ್ದೆ 2002ರ ಅಡಿಯಲ್ಲಿ ಆರ್.ಎಂ.ಮಂಜುನಾಥ ಗೌಡ ಮತ್ತು ಅವರ ಪತ್ನಿಯ ಹೆಸರಿನಲ್ಲಿರುವ ಆಸ್ತಿಯನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ ಎಂದು ಇ.ಡಿ ತಿಳಿಸಿದೆ.
ನಕಲಿ ಬಂಗಾರ ಅಡಮಾನ ಪ್ರಕರಣ ಸಂಬಂಧ ಏಪ್ರಿಲ್ 8ರಂದು ಶಿವಮೊಗ್ಗ ಮತ್ತು ಬೆಂಗಳೂರಿನ ವಿವಿಧೆಡೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಸಂದರ್ಭ ಡಿಜಿಟಲ್ ಸಾಕ್ಷಿ ಸೇರಿದಂತೆ ವಿವಿಧ ಸಾಕ್ಷಿ ಲಭ್ಯವಾಗಿತ್ತು. ಅಲ್ಲದೆ 2.5 ಕೆ.ಜಿ ಚಿನ್ನಾಭರಣ ವಶಕ್ಕೆ ಪಡೆಯಲಾಗಿತ್ತು. ಏಪ್ರಿಲ್ 9ರಂದು ಮಂಜುನಾಥ ಗೌಡ ಅವರನ್ನು ಇ.ಡಿ. ಅಧಿಕಾರಿಗಳು ಬಂಧಿಸಿದ್ದರು. ಸದ್ಯ ಮಂಜುನಾಥ ಗೌಡ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ » ರಾಜ್ಯದಲ್ಲಿ ಸದ್ಯಕ್ಕೆ ಮುಂಗಾರು ದುರ್ಬಲ, ಇನ್ನಷ್ಟು ದಿನ ಮಳೆ ಇಲ್ಲ, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200