ಶಿವಮೊಗ್ಗದಲ್ಲಿ ಶಾಲೆಗಳಿಗೆ ರಜೆ ವಿಚಾರ, ಶಿಕ್ಷಣ ಇಲಾಖೆಯಿಂದ ಪ್ರಮುಖ ಸೂಚನೆ, ಯಾವ್ಯಾವ ಶಾಲೆಗೆ ರಜೆ ಸಿಗುತ್ತೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE | 24 JULY 2023

SHIMOGA : ಭಾರಿ ಮಳೆಯಾಗುತ್ತಿರುವ ಮೂರು ತಾಲೂಕುಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ (Holiday) ಘೋಷಿಸುವ ಸಂಬಂಧ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ಪ್ರಮುಖ ನಿರ್ಧಾರ ಕೈಗೊಂಡಿದೆ. ಮಳೆಯ ತೀವ್ರತೆಯನ್ನು ಗಮನಿಸಿ ಶಾಲೆಯ ಎಸ್‌ಡಿಎಂಸಿ ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿಯೊಂದಿಗೆ ಚರ್ಚಿಸಿ ರಜೆ ಘೋಷಿಸಬಹುದು ಎಂದು ತಿಳಿಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

DDPI-office-Shimoga.

ಜು.25ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ (Holiday) ಘೋಷಿಸುವ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಪ್ರಮುಖ ಸೂಚನೆ ಹೊರಡಿಸಿದೆ.

ಏನಿದೆ ಸೂಚನಾ ಪತ್ರದಲ್ಲಿ?

ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕು ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಸೂಚನೆ ಅನ್ವಯ ಶಾಲೆಯ ಎಸ್‌ಡಿಎಂಸಿ ಸದಸ್ಯರು ಮಳೆ ತೀವ್ರತೆ ಅನುಸಾರವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಜೊತೆ ಚರ್ಚಿಸಬೇಕಿದೆ. ಅಗತ್ಯವಿದ್ದರೆ ಜು.25ರಂದು ರಜೆ ಘೋಷಿಸಬಹುದಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಮಾತ್ರ ಅನ್ವಯವಾಗುವಂತೆ ರಜೆ ಘೋಷಿಸಬಹುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮುಳುಗಿದ ಮಂಟಪ, ನದಿ ವೀಕ್ಷಣೆಗೆ ಸೇತುವೆ ಮೇಲೆ ಜನವೋ ಜನ

ರಜೆ ಘೋಷಿಸಿದರೆ ಮುಂದಿನ ರಜಾ ದಿನಗಳಲ್ಲಿ ತರಗತಿ ನಡೆಸಿ ಶಾಲಾ ದಿನಗಳನ್ನು ಮರು ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಶಾಲಾ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿ ಡಿಡಿಪಿಐ ಜ್ಞಾಪನಾ ಪತ್ರ ಹೊರಡಿಸಿದ್ದಾರೆ.

PARISHRAMA NEET Academy

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment