ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 24 JULY 2023
SHIMOGA : ಭಾರಿ ಮಳೆಯಾಗುತ್ತಿರುವ ಮೂರು ತಾಲೂಕುಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ (Holiday) ಘೋಷಿಸುವ ಸಂಬಂಧ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ಪ್ರಮುಖ ನಿರ್ಧಾರ ಕೈಗೊಂಡಿದೆ. ಮಳೆಯ ತೀವ್ರತೆಯನ್ನು ಗಮನಿಸಿ ಶಾಲೆಯ ಎಸ್‌ಡಿಎಂಸಿ ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿಯೊಂದಿಗೆ ಚರ್ಚಿಸಿ ರಜೆ ಘೋಷಿಸಬಹುದು ಎಂದು ತಿಳಿಸಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಜು.25ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ (Holiday) ಘೋಷಿಸುವ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಪ್ರಮುಖ ಸೂಚನೆ ಹೊರಡಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಏನಿದೆ ಸೂಚನಾ ಪತ್ರದಲ್ಲಿ?
ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕು ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಸೂಚನೆ ಅನ್ವಯ ಶಾಲೆಯ ಎಸ್‌ಡಿಎಂಸಿ ಸದಸ್ಯರು ಮಳೆ ತೀವ್ರತೆ ಅನುಸಾರವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಜೊತೆ ಚರ್ಚಿಸಬೇಕಿದೆ. ಅಗತ್ಯವಿದ್ದರೆ ಜು.25ರಂದು ರಜೆ ಘೋಷಿಸಬಹುದಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಮಾತ್ರ ಅನ್ವಯವಾಗುವಂತೆ ರಜೆ ಘೋಷಿಸಬಹುದು ಎಂದು ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮುಳುಗಿದ ಮಂಟಪ, ನದಿ ವೀಕ್ಷಣೆಗೆ ಸೇತುವೆ ಮೇಲೆ ಜನವೋ ಜನ
ರಜೆ ಘೋಷಿಸಿದರೆ ಮುಂದಿನ ರಜಾ ದಿನಗಳಲ್ಲಿ ತರಗತಿ ನಡೆಸಿ ಶಾಲಾ ದಿನಗಳನ್ನು ಮರು ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಶಾಲಾ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿ ಡಿಡಿಪಿಐ ಜ್ಞಾಪನಾ ಪತ್ರ ಹೊರಡಿಸಿದ್ದಾರೆ.