18 ವರ್ಷ ಮೇಲ್ಪಟ್ಟವರಿಗೆ ಲಸಿಕೆ, ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಮೊದಲ ದಿನ ಹೇಗಿತ್ತು ರಿಸ್ಪಾನ್ಸ್?

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 MAY 2021

ಹದಿನೆಂಟು ವರ್ಷ ಮೇಲ್ಪಟ್ಟವರಿಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತಿನಿಂದ ಕರೋನ ಲಸಿಕೆ ನೀಡಲಾಯಿತು.

ಮೆಗ್ಗಾನ್ ಆಸ್ಪತ್ರೆಯಲ್ಲಿ ಬೆಳಗ್ಗೆಯಿಂದ ದೊಡ್ಡ ಸಂಖ್ಯೆಯಲ್ಲಿ ಲಸಿಕೆ ವಿತರಣೆ ಮಾಡಲಾಯಿತು. 18 ವರ್ಷದಿಂದ 45 ವರ್ಷದವರ ವರೆಗೆ ಲಸಿಕೆ ನೀಡಲಾಯಿತು. ಬೆಳಗ್ಗೆಯಿಂದ ಕ್ಯೂನಲ್ಲಿ ನಿಂತಿದ್ದು, ಲಸಿಕೆ ಪಡೆಯಲಾಗಿದೆ.

ಬೆಳಗ್ಗೆ ಸಣ್ಣದಾಗಿದ್ದ ಕ್ಯೂ ಮಧ್ಯಾಹ್ನದ ವೇಳೆಗೆ ದೊಡ್ಡದಾಯಿತು. ಮೆಗ್ಗಾನ್ ಆಸ್ಪತ್ರೆ ಕಟ್ಟಡದಿಂದ ಹೊರಗಿನವರೆಗೆ ಜನರು ಕ್ಯೂನಲ್ಲಿ ನಿಂತಿದ್ದು ಲಸಿಕೆ ಪಡೆದರು.

ಭದ್ರಾವತಿ ವರದಿ

ತಾಲೂಕು ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಮೀಸಲಿಡಲಾಗಿದೆ. ಆದ್ದರಿಂದ ಹಳೆನಗರದ ಸಂಚಿ ಹೊನ್ನಮ್ಮ ಬಾಲಕಿಯರ ಶಾಲೆಯಲ್ಲಿ ಕೋವಿಡ್ ಲಸಿಕೆ ನೀಡಲಾಯಿತು. 18 ರಿಂದ 45 ವರ್ಷದವರಿಗೆ ಶಾಲೆಯ ಮೊದಲ ಮಹಡಿಯಲ್ಲಿ ಲಸಿಕೆ ನೀಡಲಾಯಿತು. ಕೆಳ ಮಹಡಿಯಲ್ಲಿ 45 ವರ್ಷ ಮೀರಿದವರಿಗೆ ಲಸಿಕೆ ನೀಡಲಾಯಿತು.

ಸಾಗರದ ರಿಪೋರ್ಟ್

ದೇವರಾಜ ಅರಸು ಭವನದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಶಾಸಕ ಹರತಾಳು ಹಾಲಪ್ಪ ಅವರು ಭೇಟಿ ನೀಡಿ, ಲಸಿಕೆ ವಿತರಣೆ ಕಾರ್ಯವನ್ನು ಪರಿಶೀಲಿಸಿದರು. ಲಸಿಕೆ ಹಾಕಿಸಿಕೊಳ್ಳಲು ಬರುವವರಿಗೆ ಭವನದ ಹೊರಗೆ ಪೆಂಡಾಲ್ ಹಾಕಿ ಕೂರಲು ವ್ಯವಸ್ಥೆ ಮಾಡಲಾಗಿತ್ತು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment