ಶಿವಮೊಗ್ಗ: ಚುನಾವಣಾ ಆಯೋಗದ ಅಧಿಕಾರಿಗಳು ಶಿವಮೊಗ್ಗ ಜಿಲ್ಲೆಗೆ ಭೇಟಿ (visit) ನೀಡಿ ಮತಗಟ್ಟೆ ಮತ್ತು ಸಮಗ್ರ ಚುನಾವಣಾ ಪ್ರಕ್ರಿಯೆ ಪರಿಶೀಲಿಸಿದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ
ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಯಲ್ಲಿ ಮತಗಟ್ಟೆ ಅಧಿಕಾರಿಗಳಿಗೆ (ಬಿಎಲ್‌ಓ) ತರಬೇತಿ ನೀಡಲಾಯಿತು. ಮತಗಟ್ಟೆ ಅಧಿಕಾರಿಗಳ ಕರ್ತವ್ಯ ಮತ್ತು ಜವಾಬ್ದಾರಿ ಕುರಿತು ತಿಳಿಸಿದರು. ನಂತರ ಮತಗಟ್ಟೆ ಅಧಿಕಾರಿಗಳ ಜೊತೆಗೆ ಸಂವಾದ ನಡೆಸಲಾಯಿತು.

ಮತಗಟ್ಟೆಗಳಿಗೆ ಭೇಟಿ, ಎಲ್ಲೆಲ್ಲಿಗೆ ತೆರಳಿದರು?
ತರಬೇತಿ ಬಳಿಕ ಚುನಾವಣಾ ಆಯೋಗದ ಅಧಿಕಾರಿಗಳ ತಂಡ ವಿವಿಧೆಡೆ ಮತಗಟ್ಟೆಗಳನ್ನು ಪರಿಶೀಲಿಸಿತು. ಶಿವಮೊಗ್ಗ ಗ್ರಾಮಾಂತರ ಮತ್ತು ಸಾಗರ ವಿಧಾನಸಭಾ ಕ್ಷೇತ್ರಗಳ ಆಯ್ದ ಮತಗಟ್ಟೆಗಳಿಗೆ ಭೇಟಿ ನೀಡಿ ಕನಿಷ್ಠ ಸೌಲಭ್ಯಗಳಿವೆಯೆ ಎಂದು ಪರಿಶೀಲಿಸಿದರು. ಸಂಸತ್ತು ಹಾಗೂ ವಿಧಾನಸಭಾ ಚುನಾವಣೆಯ ಮತದಾನದ ಶೇಕಡಾವಾರು ಅಂಕಿಅಂಶಗಳು, ಮತದಾರರ ಪಟ್ಟಿ ಕುರಿತು ಮಾಹಿತಿ ಪಡೆದರು.
ಇದನ್ನೂ ಓದಿ » ಓಲಾ ಸ್ಕೂಟರ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗದ ಗ್ರಾಹಕ ನ್ಯಾಯಾಲಯ, ಮಹತ್ವದ ತೀರ್ಪು ಪ್ರಕಟ
ಚುನಾವಣಾಗೆ ಮೂಲಭೂತ ಸಿದ್ಧತೆ, ದೋಷರಹಿತ ಮತದಾರರ ಪಟ್ಟಿ, ಮತದಾರರಿಗೆ ಹೆಚ್ಚಿನ ಸೌಲಭ್ಯ ಒದಗಿಸುವುದು, ಜಿಲ್ಲೆಯಲ್ಲಿ ಚುನಾವಣೆಗಳು ಸುಗಮವಾಗಿ ನಡೆಯುವಂತೆ ಖಾತ್ರಿಪಡಿಸುವ ಉದ್ದೇಶದಿಂದ ಜಿಲ್ಲೆಗೆ ಭೇಟಿ ನೀಡಲಾಗಿದೆ ಎಂದು ಚುನಾವಣಾ ಆಯೋಗದ ತಂಡ ತಿಳಿಸಿದೆ.
VISIT
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





