ಶಿವಮೊಗ್ಗಕ್ಕೆ ಚುನಾವಣಾ ಆಯೋಗ ಅಧಿಕಾರಿಗಳ ಟೀಮ್‌, ಮತಗಟ್ಟೆಗಳಿಗೆ ಭೇಟಿ, ಪರಿಶೀಲನೆ, ಯಾಕೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ: ಚುನಾವಣಾ ಆಯೋಗದ ಅಧಿಕಾರಿಗಳು ಶಿವಮೊಗ್ಗ ಜಿಲ್ಲೆಗೆ ಭೇಟಿ (visit) ನೀಡಿ ಮತಗಟ್ಟೆ ಮತ್ತು ಸಮಗ್ರ ಚುನಾವಣಾ ಪ್ರಕ್ರಿಯೆ ಪರಿಶೀಲಿಸಿದರು.
➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಯಲ್ಲಿ ಮತಗಟ್ಟೆ ಅಧಿಕಾರಿಗಳಿಗೆ (ಬಿಎಲ್‌ಓ) ತರಬೇತಿ ನೀಡಲಾಯಿತು. ಮತಗಟ್ಟೆ ಅಧಿಕಾರಿಗಳ ಕರ್ತವ್ಯ ಮತ್ತು ಜವಾಬ್ದಾರಿ ಕುರಿತು ತಿಳಿಸಿದರು. ನಂತರ ಮತಗಟ್ಟೆ ಅಧಿಕಾರಿಗಳ ಜೊತೆಗೆ ಸಂವಾದ ನಡೆಸಲಾಯಿತು.

election-commission-officers-visit-polling-booths.

ಮತಗಟ್ಟೆಗಳಿಗೆ ಭೇಟಿ, ಎಲ್ಲೆಲ್ಲಿಗೆ ತೆರಳಿದರು?

ತರಬೇತಿ ಬಳಿಕ ಚುನಾವಣಾ ಆಯೋಗದ ಅಧಿಕಾರಿಗಳ ತಂಡ ವಿವಿಧೆಡೆ ಮತಗಟ್ಟೆಗಳನ್ನು ಪರಿಶೀಲಿಸಿತು. ಶಿವಮೊಗ್ಗ ಗ್ರಾಮಾಂತರ ಮತ್ತು ಸಾಗರ ವಿಧಾನಸಭಾ ಕ್ಷೇತ್ರಗಳ ಆಯ್ದ ಮತಗಟ್ಟೆಗಳಿಗೆ ಭೇಟಿ ನೀಡಿ ಕನಿಷ್ಠ ಸೌಲಭ್ಯಗಳಿವೆಯೆ ಎಂದು ಪರಿಶೀಲಿಸಿದರು. ಸಂಸತ್ತು ಹಾಗೂ ವಿಧಾನಸಭಾ ಚುನಾವಣೆಯ ಮತದಾನದ ಶೇಕಡಾವಾರು ಅಂಕಿಅಂಶಗಳು, ಮತದಾರರ ಪಟ್ಟಿ ಕುರಿತು ಮಾಹಿತಿ ಪಡೆದರು.

ಇದನ್ನೂ ಓದಿ » ಓಲಾ ಸ್ಕೂಟರ್‌ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗದ ಗ್ರಾಹಕ ನ್ಯಾಯಾಲಯ, ಮಹತ್ವದ ತೀರ್ಪು ಪ್ರಕಟ

ಚುನಾವಣಾಗೆ ಮೂಲಭೂತ ಸಿದ್ಧತೆ, ದೋಷರಹಿತ ಮತದಾರರ ಪಟ್ಟಿ, ಮತದಾರರಿಗೆ ಹೆಚ್ಚಿನ ಸೌಲಭ್ಯ ಒದಗಿಸುವುದು, ಜಿಲ್ಲೆಯಲ್ಲಿ ಚುನಾವಣೆಗಳು ಸುಗಮವಾಗಿ ನಡೆಯುವಂತೆ ಖಾತ್ರಿಪಡಿಸುವ ಉದ್ದೇಶದಿಂದ ಜಿಲ್ಲೆಗೆ ಭೇಟಿ ನೀಡಲಾಗಿದೆ ಎಂದು ಚುನಾವಣಾ ಆಯೋಗದ ತಂಡ ತಿಳಿಸಿದೆ.

VISIT

Leave a Comment