ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 10 MAY 2023
SHIMOGA : ಜಿಲ್ಲೆಯಲ್ಲಿ ಚುನಾವಣಾ ಪ್ರಕ್ರಿಯೆ ಶಾಂತಿಯುತವಾಗಿ ಪೂರ್ಣಗೊಂಡಿದೆ. ಶೇ.78.18ರಷ್ಟು ಮತದಾನವಾಗಿದೆ. ಅಭ್ಯರ್ಥಿಗಳ ಭವಿಷ್ಯವನ್ನು ಒಡಲೊಳಗೆ ಭದ್ರ ಮಾಡಿಕೊಂಡಿರುವ ಮತ ಯಂತ್ರಗಳು ಇನ್ನು ಕೆಲವೆ ಹೊತ್ತಿನಲ್ಲಿ ಸ್ಟ್ರಾಂಗ್ ರೂಂ (Strong Room) ತಲುಪಲಿವೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಅಂತಿಮವಾಗಿ ಶಿವಮೊಗ್ಗ ಗ್ರಾಮಾಂತರದಲ್ಲಿ ಶೇ.83.71ರಷ್ಟು ಮತದಾನವಾಗಿದೆ. ಭದ್ರಾವತಿಯಲ್ಲಿ ಶೇ.68.47, ಶಿವಮೊಗ್ಗದಲ್ಲಿ ಶೇ.68.74, ತೀರ್ಥಹಳ್ಳಿಯಲ್ಲಿ ಶೇ.84.83, ಶಿಕಾರಿಪುರದಲ್ಲಿ ಶೇ.82.57, ಸೊರಬದಲ್ಲಿ ಶೇ. 82.66, ಸಾಗರದಲ್ಲಿ ಶೇ. 79.85ರಷ್ಟು ಮತದಾನವಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಡಿಮಸ್ಟರಿಂಗ್ಗೆ ಮತಯಂತ್ರಗಳು
ಸಂಜೆ 6 ಗಂಟೆಗೆ ಮತದಾನ ಪೂರ್ಣಗೊಂಡಿದೆ. ಕೆಲವು ಮತಗಟ್ಟೆಗಳಲ್ಲಿ ಮತದಾರರು ಸರತಿಯಲ್ಲಿ ನಿಂತಿದ್ದರಿಂದ ಅವರಿಗೆ ಟೋಕನ್ ಕೊಟ್ಟು, ಮತದಾನಕ್ಕೆ ಅವಕಾಶ ಕಲ್ಪಿಸಲಾಯಿತು. ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಧಿಕಾರಿಗಳು ಮತ ಯಂತ್ರಗಳನ್ನು ಭದ್ರವಾಗಿ ಸೀಲ್ ಮಾಡಿದರು. ಅವುಗಳನ್ನು ಡಿಮಸ್ಟರಿಂಗ್ ಕೇಂದ್ರಗಳಿಗೆ ರವಾನಿಸಿದ್ದಾರೆ. ಮತಗಟ್ಟೆವಾರು ಮತಯಂತ್ರಗಳನ್ನು ಡಿಮಸ್ಟರಿಂಗ್ ಮಾಡಲಾಗುತ್ತಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಸ್ಟ್ರಾಂಗ್ ರೂಂನಲ್ಲಿ ಭದ್ರವಾಗಲಿವೆ
ಡಿಮಸ್ಟರಿಂಗ್ ಕೇಂದ್ರದಿಂದ ಮತ ಯಂತ್ರಗಳನ್ನು ಸ್ಟ್ರಾಂಗ್ ರೂಂಗೆ ಕೊಂಡೊಯ್ಯಲಾಗುತ್ತದೆ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಸ್ಟ್ರಾಂಗ್ ರೂಂ ಸ್ಥಾಪಿಸಲಾಗಿದೆ. ಎಲ್ಲಾ ಕ್ಷೇತ್ರಗಳ ಮತ ಯಂತ್ರಗಳನ್ನು ಭಾರಿ ಭದ್ರತೆಯಲ್ಲಿ ಸಹ್ಯಾದ್ರಿ ಕಾಲೇಜಿಗೆ ತಂದಿಡಲಾಗುತ್ತದೆ. ಇಲ್ಲಿ ಪ್ರತ್ಯೇಕ ಕೊಠಡಿಗಳಲ್ಲಿ ಮತ ಯಂತ್ರಗಳನ್ನು ಇರಿಸಿ ಭದ್ರತೆಗೆ ಸಿಆರ್ಪಿಎಫ್ ಮತ್ತು ಸ್ಥಳೀಯ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತದೆ.
ಇದನ್ನೂ ಓದಿ – ಬೆಳಗ್ಗೆಯಿಂದ ಈ ಊರಲ್ಲಿ ಚಲಾವಣೆಯಾಗಿದ್ದು ಎರಡೇ ಮತ, ಮತಗಟ್ಟೆಯಿಂದ ನೂರು ಮೀಟರ್ ದೂರ ಉಳಿದ ಜನ
ಮೇ 13ರಂದು ಚುನಾವಣೆ ಅಧಿಕಾರಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ (Strong Room) ತೆಗೆದು ಮತ ಯಂತ್ರಗಳನ್ನು ಹೊರಗೆ ತೆಗೆದು ಎಣಿಕೆ ಕಾರ್ಯ ನಡೆಸಲಾಗುತ್ತದೆ.