SHIVAMOGGA LIVE NEWS | AIRPORT| 08 ಮೇ 2022
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 25 ಎಕರೆ ಭೂಮಿ ಸ್ವಾಧೀನ ಸೇರಿದಂತೆ ರೈತರಿಗೆ ನಿವೇಶನ ಹಾಗೂ ಪರಿಹಾರ ಮಂಜೂರಾತಿಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ವಿಧಾನಸೌಧದಲ್ಲಿ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಸರ್ಕಾರದ ಉನ್ನತಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಭೂಮಿ ಸ್ವಾಧೀನಕ್ಕೆ ಸಂಬಂಧಪಟ್ಟಂತೆ ರೈತರಿಗೆ ಪರಿಹಾರ ನೀಡುವುದು ಹಾಗೂ ಕರ್ನಾಟಕ ಗೃಹ ಮಂಡಳಿಯಿಂದ ರೈತರಿಗೆ ನಿವೇಶನ ನೀಡುವುದಕ್ಕೆ ಬಾಕಿ ಇದ್ದ ಕಡತಗಳಿಗೆ ಒಪ್ಪಿಗೆ ದೊರೆತಿದೆ ಎಂದರು.
ಎಂಆರ್‌ಎಸ್ ವೃತ್ತದಿಂದ ವಿಮಾನ ನಿಲ್ದಾಣದವರೆಗಿನ 16 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಗಲೀಕರಣ ಹಾಗೂ ಆಲಂಕಾರಿಕ ವಿದ್ಯುತ್ ದೀಪ ಅಳವಡಿಸುವ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದೆ. ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಬಹಳ ದಿನಗಳಿಂದ ಇದ್ದ ರೈತರ ಬೇಡಿಕೆಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ತಿಳಿಸಿದರು.
ಶಾಸಕ ಕೆ.ಬಿ.ಅಶೋಕ್ ನಾಯ್ಕ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವಗುಪ್ತಾ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್, ಕರ್ನಾಟಕ ಗೃಹ ಮಂಡಳಿ ಆಯುಕ್ತ ರಮೇಶ್, ಕೆಎಸ್‌ಐಐಡಿಸಿ ವ್ಯವಸ್ಥಾಪಕ ನಿರ್ದೇಶಕ ರವಿ, ಶಿವಮೊಗ್ಗ ಡಿಸಿ ಡಾ. ಆರ್.ಸೆಲ್ವಮಣಿ ಹಾಜರಿದ್ದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾವೆಲ್ಲ ಹೆಸರು ಇಡುವಂತೆ ಒತ್ತಾಯವಿದೆ? ಇಲ್ಲಿದೆ ಲಿಸ್ಟ್