ಶಾಲೆಗಳಿಗೆ ರಜೆ ವಿಚಾರದಲ್ಲಿ ಸುಳ್ಳು ಮೆಸೇಜ್, ಕಿಡಿಗೇಡಿಗಳ ವಿರುದ್ಧ ಶಿಸ್ತು ಕ್ರಮದ ವಾರ್ನಿಂಗ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 8 ಜುಲೈ 2022

ಶಾಲೆಗಳ (SCHOOL) ರಜೆ ವಿಚಾರವಾಗಿ ವಾಟ್ಸಪ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿದೆ. ಇದರಿಂದ ಜಿಲ್ಲೆಯಲ್ಲಿ ಗೊಂದಲ ನಿರ್ಮಾಣವಾಗಿದೆ. ಈ ನಡುವೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ.

Shimoga Nanjappa Hospital

ರಜೆ ವಿಚಾರವಾಗಿ ಸುಳ್ಳು ಸುದ್ದಿ

ಜಿಲ್ಲೆಯಲ್ಲಿ ಹೆಚ್ಚು ಮಳೆ ಆಗುತ್ತಿರುವ ತಾಲೂಕುಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ರಜೆ ಘೋಷಣೆ ಮಾಡಿದ್ದಾರೆ. ಈ ಸಂದೇಶವನ್ನು ತಿರುಚಿ, ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಲ್ಲಿ ಗೊಂದಲ ಉಂಟಾಗಿದೆ.

ಯಾವ ತಾಲೂಕಿಗೆ ರಜೆ ಇದೆ?

ಭಾರಿ ಮತ್ತು ನಿರಂತರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನ ಶಾಲೆಗಳಿಗೆ ಮಾತ್ರ ಜುಲೈ 8ರಂದು ರಜೆ ಘೋಷಿಸಲಾಗಿದೆ. ಉಳಿದ ತಾಲೂಕಿನ ಶಾಲೆಗಳಲ್ಲಿ ಯಥಾ ಪ್ರಕಾರ ತರಗತಿಗಳು ನಡೆಯಲಿವೆ.

ಮೆಸೇಜನ್ನೆ ತಿರುಚಿದ್ದಾರೆ

ಜೋರು ಮಳೆ ಹಿನ್ನೆಲೆ ಜುಲೈ 6ರಂದು ಸಾಗರ, ತೀರ್ಥಹಳ್ಳಿ, ಹೊಸನಗರದ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಜುಲೈ 7ರಂದು ಇಡೀ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಜುಲೈ 8ರಂದು ಮತ್ತೆ ಮೂರು ತಾಲೂಕಿಗೆ ಮಾತ್ರ ರಜೆ ನೀಡಲಾಗಿದೆ. ಆದರೆ ಕಿಡಿಗೇಡಿಗಳು ಉಪ ನಿರ್ದೇಶಕರ ಸಂದೇಶವನ್ನೆ ತಿರುಚಿದ್ದಾರೆ. ಜುಲೈ 8ರಂದು ಇಡೀ ಜಿಲ್ಲೆಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ ಎಂದು ಮೆಸೇಜ್ ತಿರುಚಿ, ವಾಟ್ಸಪ್ ಗ್ರೂಪ್, ಫೇಸ್ ಬುಕಲ್ಲಿ ಪ್ರಕಟಿಸಿದ್ದಾರೆ. ಇದರಿಂದ ಗೊಂದಲ ನಿರ್ಮಾಣವಾಗಿದೆ.

ಕಠಿಣ ಕ್ರಮದ ಎಚ್ಚರಿಕೆ

ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಮೆಸೇಜನ್ನು ತಿರುಚಿ, ಗೊಂದಲಕ್ಕೆ ಕಾರಣವಾದ ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಸಂದೇಶವನ್ನು ತಿರುಚಿದವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಉಪ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ – ಹರಾಜಿಗೆ ಉತ್ಸಾಹ, ನಿರ್ಮಾಣಕ್ಕೆ ತಾತ್ಸಾರ, ಮಕ್ಕಳಿಗಾಗಿ ‘ಟಾರ್ಪಲ್ ಬಸ್ ಸ್ಟಾಪ್’, ಯಾಕಿಂಗೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment