ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 10 AUGUST 2024 : ‘ಕಾರ್ಪೊರೇಟ್ ಕಂಪನಿಗಳೇ (Corporate) ದೇಶಬಿಟ್ಟು ತೊಲಗಿ’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಕಾರ್ಪೊರೇಟ್ ಕಂಪನಿಗಳನ್ನು ಪ್ರತಿನಿಧಿಸುವ ಪ್ರತಿಕೃತಿಯನ್ನು ದಹಿಸಿ ಪ್ರತಿರೋಧ ವ್ಯಕ್ತಪಡಿಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ ⇒ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ, ಹೊಸನಗರದಲ್ಲಿ ಹೃದಯವಿದ್ರಾವಕ ಘಟನೆ
ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿದ ದಿನವಾದ ಇಂದು ಕೃಷಿಯ ಮೇಲೆ ಕಾರ್ಪೊರೇಟ್ ಕಂಪನಿಗಳ ಹಿಡಿತದಿಂದ ಮುಕ್ತಿಯಾಗಿ ಆಕ್ರಮಣ ನಿಲ್ಲಬೇಕು. ರೈತರ ಬೆಳೆಗಳಿಗೆ ಎಂಎಸ್‌ಪಿ ಖಾತ್ರಿಯಾಗಬೇಕು. ರೈತರ ಹಾಗೂ ಜನಸಾಮಾನ್ಯರ ಬದುಕಿಗೆ ಕಂಟಕವಾಗಿರುವ ವಿದ್ಯುತ್ ಖಾಸಗೀಕರಣ ರದ್ದು ಮಾಡಬೇಕು. ಕಂಪನಿಗಳ ಹಿತ ಕಾಯಲು ತಂದಿರುವ ಕಾರ್ಮಿಕ ವಿರೋಧಿ ನಾಲ್ಕು ಕಾಯ್ದೆಗಳನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿದರು.
ಉದ್ಯೋಗ ಭದ್ರತೆ ದೇಶದ ನೀತಿಯಾಗಬೇಕು. ಹಿಂಬಾಗಿಲಿನಿಂದ ಬಂದು ಮೀಸಲಾತಿಯನ್ನು ಸರ್ವಾನಾಶಗೊಳಿಸುತ್ತಿರುವ ಕಾರ್ಪೊರೇಟ್ ಪರ ಖಾಸಗೀಕರಣ ನಿಂತು ಮೀಸಲಾತಿ ಜಾರಿಯಾಗಬೇಕು ಎಂದು ಆಗ್ರಹಿಸಲಾಯಿತು.
ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ, ಪ್ರಮುಖರಾದ ಇ.ಬಿ.ಜಗದೀಶ್, ಕೆ.ರಾಘವೇಂದ್ರ, ಟಿ. ಎಂ.ಚಂದ್ರಪ್ಪ ಹಿಟ್ಟೂರು ರಾಜು, ಜಿ.ಎನ್. ಪಂಚಾಕ್ಷರಿ, ಜ್ಞಾನೇಶ್, ಸಿ.ಚಂದ್ರಪ್ಪ, ಗುರುಶಾಂತ ಇದ್ದರು.
ಇದನ್ನೂ ಓದಿ ⇒ ನಾಗರ ಪಂಚಮಿಯಂದೆ ಹಾವು ಕಡಿದು ಬಾಣಂತಿ ಸಾವು