ಶಿವಮೊಗ್ಗ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ನಿರುದ್ಯೋಗಿಗಳಿಗೆ 12 ದಿನಗಳ ಉಚಿತ ಫಾಸ್ಟ್ ಫುಡ್ ತಯಾರಿಕೆ ತರಬೇತಿ ಶಿಬಿರ ಆಯೋಜಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. (ಈ ಸುದ್ದಿಯನ್ನು ಇನ್ನು 52 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ನವೆಂಬರ್ 30 ರಿಂದ ಶಿಬಿರ ಪ್ರಾರಂಭವಾಗಲಿದೆ. ಶಿಬಿರದಲ್ಲಿ ಪಾನಿ ಪೂರಿ, ಚಾಟ್ ಮಸಾಲ, ಕಚೋರಿ, ಗೋಬಿ ಮಂಚೂರಿ, ಫ್ರೈಡ್ ರೈಸ್ ಹಾಗೂ ಸಮೋಸ ಸೇರಿದಂತೆ ವಿವಿಧ ಚಾಟ್ಸ್ ತಯಾರಿಕೆ ಬಗ್ಗೆ ತರಬೇತಿ ನೀಡಲಾಗುತ್ತದೆ. ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 49 ವರ್ಷ ವಯೋಮಿತಿಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ಪಾಲ್ಗೊಳ್ಳಬಹುದು.

ಅಭ್ಯರ್ಥಿಗಳಿಗೆ ತರಬೇತಿ, ಊಟ ಹಾಗೂ ವಸತಿ ಸೌಕರ್ಯ ಉಚಿತವಾಗಿರುತ್ತದೆ. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳಿಗೆ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ಪೂರ್ಣಗೊಳಿಸಿದ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ನವೆಂಬರ್ 25 ರಂದು ಬೆಳಿಗ್ಗೆ 9.30 ಕ್ಕೆ ಸೊಣ್ಣಹಳ್ಳಿಪುರದಲ್ಲಿರುವ ಸಂಸ್ಥೆಯ ಆವರಣದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ವಿದ್ಯಾರ್ಹತೆ ಮತ್ತು ವಿಳಾಸದ ದಾಖಲೆಗಳೊಂದಿಗೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗೆ ಹಾಗೂ ಹೆಸರು ನೋಂದಾಯಿಸಲು ಮೊಬೈಲ್ ಸಂಖ್ಯೆ: 8970476050, 9591514154, 9686248369, 6363139123 ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.