ಶಿವಮೊಗ್ಗ: ತೋಟಗಾರಿಕೆ ಇಲಾಖೆಯು ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. (Applications)
ಕಂದು ಬಾಳೆ, ಅಂಗಾಂಶ ಬಾಳೆ, ತರಕಾರಿ, ಕಾಳುಮೆಣಸು, ಗೋಡಂಬಿ, ಹೂವಿನ ಬೆಳೆ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಕಳೆ ಚಾಪೆ, ಮಿನಿ ಟ್ರ್ಯಾಕ್ಟರ್, ಫಾರ್ಮ್ ಗೇಟ್, ಪ್ರಾಥಮಿಕ ಸಂಸ್ಕರಣಾ ಘಟಕ, ಪ್ಯಾಕ್‌ಹೌಸ್, ಸಮಗ್ರ ಪೀಡೆ ನಿರ್ವಹಣೆ, ರಾಜ್ಯದೊಳಗೆ ಹಮ್ಮಿಕೊಳ್ಳುವ ತರಬೇತಿ ಕಾರ್ಯಕ್ರಮ, ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ-ತಾಳೆ ಬೆಳೆ ಯೋಜನೆಯಡಿ ಪ್ರದೇಶ ವಿಸ್ತರಣೆ (ಸ್ವದೇಶಿ ಮತ್ತು ವಿದೇಶಿ ತಳಿಗಳು), ಅಂತರ ಬೆಳೆ, ತಾಳೆ ಹಣ್ಣು ಕೊಯ್ಯಲು ಸಹಾಯಧನ, ಹಣ್ಣಿನ ಬೆಳೆ, ತರಕಾರಿ ಮತ್ತು ತೋಟದ ಬೆಳೆಗಳಿಗೆ ಹನಿ ನೀರಾವರಿ, ತುಂತುರು ನೀರಾವರಿ ಅಳವಡಿಕೆ ಹಾಗೂ ಕಾಳುಮೆಣಸು ಪ್ರದೇಶ ವಿಸ್ತರಣೆಗೆ ಆಸಕ್ತ ರೈತರಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ತೋಟಗಾರಿಕೆ ಯಾಂತ್ರೀಕರಣ ಯೋಜನೆಯಡಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ, ತೆಂಗಿನ ಮರ ಹತ್ತುವ ಯಂತ್ರ, ಕಳೆ ಕೊಚ್ಚುವ ಯಂತ್ರ, ಟ್ರ್ಯಾಕ್ಟರ್ ಟ್ರೇಲರ್ ಮತ್ತು ಇನ್ನಿತರ ಯಂತ್ರೋಪಕರಣಗಳಿಗೆ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಪ್ಲಾಸ್ಟಿಕ್ ಕ್ರೇಟ್, ಹಣ್ಣು ಮಾಗಿಸುವ ಘಟಕ, ಸೋಲಾರ್ ಪಂಪ್‌ಸೆಟ್, ಲಘು ಪೋಷಕಾಂಶಗಳ ಮಿಶ್ರಣ/ಬೆಳೆ ಸ್ಪೆಷಲ್ ಸಹಾಯಧನ ಹಾಗೂ ಜೇನು ಪೆಟ್ಟಿಗೆ, ಸ್ಟ್ಯಾಂಡ್‌ಗೆ ಸಹಾಯಧನ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂ.27 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಭದ್ರಾವತಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಅರ್ಧಕ್ಕರ್ಧ ಭಾಗದಲ್ಲಿ ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200