ಶಿವಮೊಗ್ಗ ರಂಗಾಯಣಕ್ಕೆ ತಂತ್ರಜ್ಞರು, ಕಲಾವಿದರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಶಿವಮೊಗ್ಗ ರಂಗಾಯಣವು (rangayana) ರೆಪರ್ಟರಿಗೆ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಮೂರು ಜನ ತಂತ್ರಜ್ಞರು ಹಾಗೂ 12 ಜನ ಕಲಾವಿದರನ್ನು ಗೌರವ ಸಂಭಾವನೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಿದ್ದು, ಆಸಕ್ತ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ.

ಪಾರಂಪರಿಕ ಕಲೆಯ ಕುಟುಂಬಗಳಿಂದ ಬಂದ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಆಯ್ಕೆಯಾದ ತಂತ್ರಜ್ಞರು ಮತ್ತು ಕಲಾವಿದರು ಆಯಾ ರಂಗಾಯಣದ ಆಡಳಿತ ನಿಯಂತ್ರಣಕ್ಕೆ ಒಳಪಟ್ಟಿರುತ್ತಾರೆ.

Shimoga-Rangayana-Kannada-Samskruti-Bhavana

ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ಶಿವಮೊಗ್ಗ ರಂಗಾಯಣ, ಸುವರ್ಣ ಸಂಸ್ಕೃತಿ ಭವನ, ಹೆಲಿಪ್ಯಾಡ್ ಹತ್ತಿರ, ಅಶೋಕನಗರ ಇವರಿಂದ ಖುದ್ದಾಗಿ ಪಡೆಯಬಹುದು. ಫೇಸ್‌ಬುಕ್ ಐಡಿ Shivamogga Rangayana ಅಥವಾ ವೆಬ್‌ಸೈಟ್ rangayanashivamogga.karnataka.gov.in ಮೂಲಕವು ಅರ್ಜಿ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಇದನ್ನೂ ಓದಿ » ದೆವ್ವ ಬಿಡಿಸೋದಾಗಿ ಕೋಲಲ್ಲಿ ಹೊಡೆದು ಹಿಂಸೆ, ನೀರಿಗಾಗಿ ಅಂಗಲಾಚುತ್ತ ಪ್ರಾಣ ಬಿಟ್ಟ ಮಹಿಳೆ, ವಿಡಿಯೋ ವೈರಲ್‌

ಭರ್ತಿ ಮಾಡಿದ ಅರ್ಜಿಯನ್ನು ಜುಲೈ 25 ರೊಳಗಾಗಿ ರಂಗಾಯಣ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅಥವಾ ಇ-ಮೇಲ್ admin.rangayanashivamogga@gmail.com ಮೂಲಕ ಸಲ್ಲಿಸುವಂತೆ ರಂಗಾಯಣದ ಆಡಳಿತಾಧಿಕಾರಿ ಎ.ಸಿ. ಶೈಲಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-256353 ನ್ನು ಸಂಪರ್ಕಿಸುವುದು.

June-2025-Report-Shivamogga-Live

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment