ಮಹಿಳೆಯರಿಗೆ ಬ್ಯೂಟಿ ಪಾರ್ಲರ್‌ ತರಬೇತಿ, ಊಟ, ವಸತಿ, ತರಬೇತಿ ಉಚಿತ, ಯಾರೆಲ್ಲ ಹೆಸರು ನೋಂದಾಯಿಸಬಹುದು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಅಕ್ಟೋಬರ್ 10ರಿಂದ 35 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗಾಗಿ ಉಚಿತ ಬ್ಯೂಟಿ ಪಾರ್ಲರ್ (Beauty Parlor) ತರಬೇತಿ ಶಿಬಿರ ಏರ್ಪಡಿಸಲಾಗಿದೆ.

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ನಿರುದ್ಯೋಗಿ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿರಲಿದೆ. ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. 

ಆಸಕ್ತಿಯುಳ್ಳ ಶಿಬಿರಾರ್ಥಿಗಳು ಸೆ. 30 ರಂದು ಬೆಳಿಗ್ಗೆ 9ಕ್ಕೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8970476050ಗೆ ಸಂಪರ್ಕಿಸಬಹುದು. 

JNNCE-Admission-Advt-scaled

ಇದನ್ನೂ ಓದಿ » ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳಿಂದ ಬೀದಿ ನಾಟಕ, ಹೇಗಿತ್ತು ನಾಟಕ?

Beauty Parlor

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment