ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಡ್ಯಾಮ್ ವಿವರ: ಶಿವಮೊಗ್ಗ ಸೇರಿದಂತೆ ಸುತ್ತಮುತ್ತ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ಜಲಾಶಯಗಳ ಒಳ ಹರಿವು (Dam level) ಕಡಿಮೆಯಾಗಿದೆ. ಈಗಾಗಲೇ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳು ಭರ್ತಿಯಾಗಿ ನೀರು ಹೊರಗೆ ಬಿಡಲಾಗುತ್ತಿದೆ. ಆದರೆ ಒಳ ಹರಿವು ಕಡಿಮೆಯಾಗಿದ್ದು, ಹೊರ ಹರಿವು ಪ್ರಮಾಣವು ತಗ್ಗಿಸಲಾಗಿದೆ.
ಯಾವ್ಯಾವ ಡ್ಯಾಮ್‌ಗೆ ಎಷ್ಟಿದೆ ಒಳ ಹರಿವು?
ತುಂಗಾ ಜಲಾಶಯ: ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು 34,903 ಕ್ಯೂಸೆಕ್‌ಗೆ ಇಳಿಕೆಯಾಗಿದೆ. ಒಟ್ಟು 26,443 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಈ ಪೈಕಿ ಕ್ರಸ್ಟ್ ಗೇಟ್‌ಗಳ ಮೂಲಕ ಹೊಳೆಗೆ 25,223 ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಮೇಲ್ದಂಡೆಗೆ 1023 ಕ್ಯೂಸೆಕ್, ಎಡದಂಡೆಗೆ 162 ಕ್ಯೂಸೆಕ್ ಹರಿಸಲಾಗುತ್ತಿದೆ.
ಭದ್ರಾ ಜಲಾಶಯ: ಇಂದು ಜಲಾಶಯದ ಒಳ ಹರಿವು 16,257 ಕ್ಯೂಸೆಕ್ ಇದೆ. 19,856 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಈ ಪೈಕಿ ಬಲದಂಡೆಗೆ 1000 ಕ್ಯೂಸೆಕ್, ಮೇಲ್ದಂಡೆಗೆ 700 ಕ್ಯೂಸೆಕ್, ಕ್ರಸ್ಟ್ ಗೇಟ್ ಮೂಲಕ 15,291 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ.

ಲಿಂಗನಮಕ್ಕಿ ಜಲಾಶಯ: ಶರಾವತಿ ಕಣಿವೆಯಲ್ಲಿ ಮಳೆ ಕಡಿಮೆಯಾಗಿದ್ದು ಲಿಂಗನಮಕ್ಕಿ ಡ್ಯಾಂನ ಒಳ ಹರಿವು 25,484 ಕ್ಯೂಸೆಕ್‌ಗೆ ಇಳಿಕೆಯಾಗಿದೆ. ಒಟ್ಟು 16,578 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಈ ಪೈಕಿ 9725 ಕ್ಯೂಸೆಕ್ ಮಾತ್ರ ರೇಡಿಯಲ್ ಗೇಟ್ ಮೂಲಕ ಹೊರಗೆ ಹರಿಸಲಾಗುತ್ತಿದೆ.
ಇದನ್ನೂ ಓದಿ » ಗೌರಿ – ಗಣೇಶ ಹಬ್ಬ, ಶಿವಮೊಗ್ಗ ಜಿಲ್ಲಾಧಿಕಾರಿಯಿಂದ 8 ಪಾಯಿಂಟ್‌ನ ಪ್ರಮುಖ ಆದೇಶ, ಏನೇನದು?
tunga, bhadra and linganamkki Dam level
LATEST NEWS
- ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

About The Editor
ನಿತಿನ್ ಆರ್.ಕೈದೊಟ್ಲು














