ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಸೋಮವಾರ ಇಡೀ ದಿನ ಏನೇನಾಯ್ತು? ಇಲ್ಲಿದೆ FATAFAT NEWS.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ತೀರ್ಥಹಳ್ಳಿಯಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ
ತೀರ್ಥಹಳ್ಳಿ: ತಾಲೂಕು ಕಚೇರಿ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ತಾಲ್ಲೂಕು ಘಟಕದ ಅಧ್ಯಕ್ಷ ಕೆಸ್ತೂರು ಮಂಜುನಾಥ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ‘ದಿನಬಳಕೆ ವಸ್ತುಗಳು ಮತ್ತು ರಸಗೊಬ್ಬರದ ಬೆಲೆ ಏರಿಕೆಯಾಗಿದೆ. ಇದು ಬಡವರು ಮತ್ತು ರೈತರನ್ನು ವಂಚಿಸುವ ನಡೆಯಾಗಿದೆ. ಬೆಲೆಗಳನ್ನು ತಕ್ಷಣ ಇಳಿಸಬೇಕು, ಇಲ್ಲವಾದರೆ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.
ಇದನ್ನೂ ಓದಿ » ಶುಭೋದಯ ಶಿವಮೊಗ್ಗ ಸುಭಾಷಿತ | 22 ಜುಲೈ 2025
ವರದಹಳ್ಳಿಯ ಗುಡ್ಡದಲ್ಲಿ ಉದ್ಯಮಿಯ ಮೃತದೇಹ
ಸಾಗರ: ವರದಹಳ್ಳಿ ಗುಡ್ಡದಲ್ಲಿ ಉದ್ಯಮಿ ನಿತಿನ್ ಶೇಟ್ (34) ಎಂಬುವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇವರು ಮಾರ್ಕೆಟ್ ರಸ್ತೆಯಲ್ಲಿ ಬಂಗಾರದ ಆಭರಣ ತಯಾರಿಸುವ ಉದ್ಯಮ ನಡೆಸುತ್ತಿದ್ದರು. ವರದಹಳ್ಳಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯವರಿಗೆ ತಿಳಿಸಿದ್ದ ನಿತಿನ್ ಅವರ ಬೈಕ್ ಸೋಮವಾರ ವರದಹಳ್ಳಿ ಬಳಿ ಪತ್ತೆಯಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ » ದಿನ ಪಂಚಾಂಗ | 22 ಜುಲೈ 2025 | ಇವತ್ತು ಯಮಗಂಡ ಕಾಲ, ರಾಹುಕಾಲ ಯಾವಾಗಿದೆ?
ಭದ್ರಾ ಬಲದಂಡೆ ನಾಲೆಗೆ ಇಂದಿನಿಂದ ನೀರು
ಶಿವಮೊಗ್ಗ: ಮುಂಗಾರು ಬೆಳೆಗೆ ಭದ್ರಾ ಜಲಾಶಯದ ಬಲದಂಡೆ ನಾಲೆಗೆ (Canal) ಜು.22ರಿಂದ 120 ದಿನ ನೀರು ಹರಿಸಲು ತೀರ್ಮಾನಿಸಲಾಗಿದೆ. ಶಿವಮೊಗ್ಗದ ಮಲವಗೊಪ್ಪದ ಭದ್ರ ಕಾಡಾ ಕಚೇರಿಯಲ್ಲಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಎಡದಂಡೆ ಕಾಲುವಿಗೆ ನೀರು ಹರಿಸುವ ದಿನಾಂಕವನ್ನು ಮುಂದೆ ಘೋಷಿಸಲು ಸಭೆಯಲ್ಲಿ ನಿರ್ಣಯಿಸಲಾಗಿದೆ.
ಇದನ್ನೂ ಓದಿ » ದಿನ ಭವಿಷ್ಯ | 22 ಜುಲೈ 2025 | ಇಂದು ಯಾವ್ಯಾವ ರಾಶಿಗೆ ಹೇಗಿರುತ್ತೆ ದಿನ?
ಮೆಗ್ಗಾನ್ ಆಸ್ಪತ್ರೆಗೆ ಮಿನಿಸ್ಟರ್ ದಿಢೀರ್ ಭೇಟಿ
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅವರು ಆಸ್ಪತ್ರೆಯಲ್ಲಿನ ಒಳರೋಗಿಗಳ ವಿಭಾಗಕ್ಕೆ ಭೇಟಿ ನೀಡಿ ದಾಖಲಾಗಿದ್ದವರ ಆರೋಗ್ಯ ವಿಚಾರಿಸಿದರು. ಅಲ್ಲದೆ ಆಸ್ಪತ್ರೆಯ ಆಡಳಿತಾಧಿಕಾರಿಗಳ ಜೊತೆಗೆ ಸಭೆ ನಡೆಸಿ, ತುರ್ತು ಅಗತ್ಯತೆ ಕುರಿತು ಮಾಹಿತಿ ಪಡೆದರು.
ನಾಳೆ ಶಿವಮೊಗ್ಗಕ್ಕೆ ನಿಖಿಲ್ ಕುಮಾರಸ್ವಾಮಿ
ಶಿವಮೊಗ್ಗ: ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜುಲೈ 23ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ, ಶಿವಮೊಗ್ಗ ನಗರ ಮತ್ತು ಭದ್ರಾವತಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳು ಗೋಪಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯನ್ನು ಬೈಕಿನಲ್ಲಿ ಹಿಂಬಾಲಿಸಿ ಮಾಂಗಲ್ಯ ಸರ ಅಪಹರಣ, ಅದೃಷ್ಟವಶಾತ್ ಮಹಿಳೆ ಪಾರು
![]()
ತೀರ್ಥಹಳ್ಳಿ: ತಾಲೂಕು ಕಚೇರಿಗೆ ಶಾಸಕ ಆರಗ ಜ್ಞಾನೇಂದ್ರ ದಿಢೀರ್ ಭೇಟಿ ನೀಡಿದರು. ಕರ್ತವ್ಯ ಲೋಪದ ಆರೋಪದ ಹಿನ್ನೆಲೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಆನಂದಪುರ: ಯಡೇಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಸರಿನಲ್ಲಿ ಸಿಲುಕಿದ್ದ ಸಿಮೆಂಟ್ ಲಾರಿ. ಎರಡು ಗಂಟೆ ವಾಹನ ಸಂಚಾರಕ್ಕೆ ಅಡಚಣೆ.
ಶಿವಮೊಗ್ಗ: ಚಿತ್ರಶೆಟ್ಟಿಹಳ್ಳಿಯಲ್ಲಿ ಅಡಿಕೆ ಗಿಡಗಳನ್ನು ತೆರವುಗೊಳಿಸಿದ ಅರಣ್ಯ ಇಲಾಖೆ. ಅಧಿಕಾರಿಗಳ ಕ್ರಮಕ್ಕೆ ರೈತರ ಆಕ್ರೋಶ.
ತೀರ್ಥಹಳ್ಳಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರಬಹುದಾದ ಕೊಲೆ ಪ್ರಕರಣಗಳ ಸೂಕ್ತ ತನಿಖೆಯಾಗಬೇಕು. ಆ ಸಂದರ್ಭ ಅಲ್ಲಿ ಕೆಲಸ ಮಾಡಿದ ಪೊಲೀಸರ ಬ್ರೈನ್ ಮ್ಯಾಪಿಂಗ್ ಆಗಬೇಕು. ಸಮಾನ ಮನಸ್ಕರ ಬಳಗದ ನೆಂಪೆ ದೇವರಾಜ್ ಆಗ್ರಹ.
ಸೊರಬ: ಕರ್ತವ್ಯಲೋಪದ ಹಿನ್ನೆಲೆ ಎಣ್ಣೆಕೊಪ್ಪ ಗ್ರಾಮ ಪಂಚಾಯಿತಿ ಪಿಡಿಒ ಎನ್.ಸುಮಾ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯಿತಿ ಸಿ.ಇ.ಒ ಹೇಮಂತ್ ಕುಮಾರ್ ಆದೇಶಿಸಿದ್ದಾರೆ.

ಸಾಗರ: ಸಿಗಂದೂರ ಸೇತುವೆ ಚರ್ಚೆ ನೆಪದಲ್ಲಿ ಸಂಸದ ರಾಘವೇಂದ್ರ, ಮಾಜಿ ಸಚಿವ ಹರತಾಳು ಹಾಲಪ್ಪ ವಿರುದ್ಧ ಕೇಳು ಪದ ಬಳಸಿದರೆ ಬಿಜೆಪಿ ಕಾರ್ಯಕರ್ತರು ತಕ್ಕ ಉತ್ತರ ನೀಡಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ದೇವೇಂದ್ರಪ್ಪ ಎಚ್ಚರಿಕೆ.
ಶಿವಮೊಗ್ಗ: ನಿವೃತ್ತ ನೌಕರರ ಪಿಂಚಣಿ ಪರಿಷ್ಕರಣೆ ಸಾಧ್ಯವಿಲ್ಲ ಎಂಬ ಕೇಂದ್ರ ಸರ್ಕಾರ ನಿರ್ಧಾರದ ವಿರುದ್ಧ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದ ನಿವೃತ್ತ ನೌಕರರ ಸಂಘ.
ಶಿವಮೊಗ್ಗ: ಆರೈಕೆ – ಅಂಧತ್ವ ಮುಕ್ತ ಶಿವಮೊಗ್ಗ ಅಭಿಯಾನಕ್ಕೆ ಸಚಿವ ಮಧು ಬಂಗಾರಪ್ಪ ಕುವೆಂಪು ರಂಗಮಂದಿರದಲ್ಲಿ ಚಾಲನೆ ನೀಡಿದರು. ಪ್ರತಿಯೊಬ್ಬರು ಆರೋಗ್ಯದ ಕುರಿತು ಕಾಳಜಿ ವಹಿಸುವಂತೆ ಸಲಹೆ ನೀಡಿದರು.
ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಎದುರಿನ ಮೈದಾನ ಪಾಲಿಕೆ ಸ್ವತ್ತು. ದಾಖಲೆಗಳನ್ನು ಪರಿಶೀಲಿಸಿ ಆಸ್ತಿ ಉಳಿಸಬೇಕು ಎಂದು ರಾಷ್ಟ್ರಭಕ್ತರ ಬಳಗದ ವತಿಯಿಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಕೆ.

ಶಿವಮೊಗ್ಗ: ಪುಟ್ಟಪ್ಪ ಕ್ಯಾಂಪ್‌ನಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಆಗಂತುಕರ ಸಂಚಾರ ಹಿನ್ನೆಲೆ ಪೊಲೀಸರಿಂದ ಕಾಲ್ನಡಿಗೆ ಗಸ್ತು. ಬಂದೂಕು ಹಿಡಿದು ಗಸ್ತು ನಡೆಸಿದ ಪೊಲೀಸರು.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






