Fatafat News
ಸ್ಪಿಂಕ್ಲರ್ ಸೆಟ್ ವಿತರಣೆಗೆ ಅರ್ಜಿ ಆಹ್ವಾನ
ಶಿವಮೊಗ್ಗ: ಜಿಲ್ಲೆಯ ಪರಿಶಿಷ್ಟ ಪಂಗಡದವರಿಗೆ ಸ್ಪಿಂಕ್ಲರ್ ಸೆಟ್ (ರೈನ್ ಗನ್) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜೂ.30ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಟೊಯೋಟ ಸಂಸ್ಥೆಯ ಡೆಮೋ ಕಾರುಗಳ ಮಾರಾಟ, ಎಕ್ಸ್‌ಚೇಂಜ್ ಮೇಳ, ಯಾವಾಗ? ಎಲ್ಲಿದೆ?
ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ
ಶಿವಮೊಗ್ಗ: ಮುಖಾಮುಖಿ ಎಸ್.ಟಿ.ರಂಗತಂಡ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ಗುತ್ಯಪ್ಪ ಕಾಲೋನಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ ಮಾಡಲಾಯ್ತು. ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಮಕ್ಕಳಿಗೆ ನೋಟ್ ಬುಕ್ ವಿತರಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಅಮೀರ್ ಪಾಷ, ಸೈನಿಕ ಮಂಜುನಾಥ್, ಮಹೇಂದ್ರರ್, ಮಂಜು, ಶಿವಕುಮಾರ್, ಶಾಲೆಯ ಮುಖ್ಯೋಪಾಧ್ಯಾರಾದ ರುಕ್ಮಿಣಿ, ಶಿಕ್ಷಕರಾದ ಭಾಗಿರಥಿ, ತಾನಾಜಿ ಮತ್ತಿತ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ » ಚಿನ್ನದ ಸರ ರಿಪೇರಿಗೆ ಬಂಗಾರದ ಅಂಗಡಿಗೆ ಬಂದ ಮಹಿಳೆ, ಪರ್ಸ್ ತೆಗೆದಾಗ ಕಾದಿತ್ತು ಆಘಾತ
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಶಿಕಾರಿಪುರ: ಸಮಾಜ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಮೊದಲು ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ https://scholarships.gov.in ನಲ್ಲಿ ಒನ್‌ಟೈಮ್ ನೋಂದಣಿ ಸಂಖ್ಯೆಯನ್ನು ಕಡ್ಡಾಯವಾಗಿ ರಚಿಸುವಂತೆ ಶಿಕಾರಿಪುರ ಸಮಾಜ ಕಲ್ಯಾಣ ಇಲಾಖೆಯ ಸಹಾಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಶಿಕಾರಿಪುರದ ಸಮಾಜ ಕಲ್ಯಾಣ ಇಲಾಖೆಯ ಸಹಾಯ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ: 08187-295026 ನ್ನು ಸಂಪರ್ಕಿಸುವುದು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200