ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದ ರೈತರಿಂದ ಕೇಂದ್ರ ಸರ್ಕಾರವು ಭತ್ತವನ್ನು (Paddy) ಖರೀದಿಸಲು ಮುಂದಾಗಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ ₹2369 ಹಾಗೂ ಗ್ರೇಡ್ ಎ ಭತ್ತ ಪ್ರತಿ ಕ್ವಿಂಟಾಲ್‌ಗೆ ₹2389 ದರ ನಿಗದಿಪಡಿಸಲಾಗಿದೆ.
ಜಿಲ್ಲಾ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆ ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮತ್ತು ನಿಗಮದ ವತಿಯಿಂದ TAPCMS/PACS/FPOs/ಉಪ ಏಜೆನ್ಸಿಗಳನ್ನು ನೇಮಿಸಲಾಗಿದೆ. ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಗರಿಷ್ಟ 50 ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುತ್ತದೆ. ಜಿಲ್ಲೆಯ ಎಲ್ಲಾ 7 ತಾಲೂಕುಗಳ ಎಪಿಎಂಸಿ ಯಾರ್ಡ್‌ಗಳಲ್ಲಿರುವ ಕೆಎಫ್‌ಸಿಎಸ್‌ಸಿ (KFCSC) ಸಗಟು ಮಳಿಗೆಗಳಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಲಾಗಿದೆ.
ಇದನ್ನೂ ಓದಿ » ಆಯನೂರು, ಕುಂಸಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಸೆ.27ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್
ಭತ್ತವನ್ನು ನೊಂದಾಯಿಸಿಕೊಳ್ಳಲು ಅ.31 ಕೊನೆಯ ದಿನಾಂಕವಾಗಿದ್ದು, ರೈತರು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಗಳಲ್ಲಿ ನೊಂದಾಯಿಸಬೇಕು. ನ.1 ರಿಂದ ಫೆ 28 ರವರೆಗೆ ಭತ್ತವನ್ನು ಖರೀದಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Paddy Purchase
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















