ರೈತರ ಗಮನಕ್ಕೆ, ಶಿವಮೊಗ್ಗ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆ ಅಡಿ ಭತ್ತ ಖರೀದಿ, ಎಲ್ಲೆಲ್ಲಿ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದ ರೈತರಿಂದ ಕೇಂದ್ರ ಸರ್ಕಾರವು ಭತ್ತವನ್ನು (Paddy) ಖರೀದಿಸಲು ಮುಂದಾಗಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ ₹2369 ಹಾಗೂ ಗ್ರೇಡ್ ಎ ಭತ್ತ ಪ್ರತಿ ಕ್ವಿಂಟಾಲ್‌ಗೆ ₹2389 ದರ ನಿಗದಿಪಡಿಸಲಾಗಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಜಿಲ್ಲಾ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆ ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮತ್ತು ನಿಗಮದ ವತಿಯಿಂದ TAPCMS/PACS/FPOs/ಉಪ ಏಜೆನ್ಸಿಗಳನ್ನು ನೇಮಿಸಲಾಗಿದೆ. ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಗರಿಷ್ಟ 50 ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುತ್ತದೆ. ಜಿಲ್ಲೆಯ ಎಲ್ಲಾ 7 ತಾಲೂಕುಗಳ ಎಪಿಎಂಸಿ ಯಾರ್ಡ್‌ಗಳಲ್ಲಿರುವ ಕೆಎಫ್‌ಸಿಎಸ್‌ಸಿ (KFCSC) ಸಗಟು ಮಳಿಗೆಗಳಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಲಾಗಿದೆ.

ಇದನ್ನೂ ಓದಿ » ಆಯನೂರು, ಕುಂಸಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಸೆ.27ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

ಭತ್ತವನ್ನು ನೊಂದಾಯಿಸಿಕೊಳ್ಳಲು ಅ.31 ಕೊನೆಯ ದಿನಾಂಕವಾಗಿದ್ದು, ರೈತರು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಗಳಲ್ಲಿ ನೊಂದಾಯಿಸಬೇಕು. ನ.1 ರಿಂದ ಫೆ 28 ರವರೆಗೆ ಭತ್ತವನ್ನು ಖರೀದಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

JNNCE-Admission-Advt-scaled

Paddy Purchase

Agriculture-News-Farmer

Leave a Comment