ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020
ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಕುಂಸಿ ಗ್ರಾಮದಲ್ಲಿ ನಿರಂತರ ಜ್ಯೋತಿ ಕಾಮಗಾರಿ ನಡೆಸುತ್ತಿದೆ. ಹಾಗಾಗಿ ಕುಂಸಿ ವಿದ್ಯುತ್ ವಿವಿ ಕೇಂದ್ರ ಎಫ್-2, ಸಿರಿಗೆರೆ ಎಫ್-3 ಮಾರ್ಗಗಳಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಯಾವ್ಯಾವ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ?
ಮೈಸವಳ್ಳಿ, ವೀರಣ್ಣನಬೆನವಳ್ಳಿ, ಸೇವಾಲಾಲ್ ನಗರ, ಯರೇಕೊಪ್ಪ, ನಾಗರಬಾವಿ, ಆಯನೂರು, ಚಾಮುಂಡಿಪುರ, ಚಿಕ್ಕದಾನವಂದಿ, ದೊಡ್ಡದಾನವಂದಿ, ಸಿರಿಗೆರೆ, ಹೊಸೂರು, ಮಲೆಶಂಕರ, ಕಲ್ಲುಕೊಪ್ಪ, ಮಂಜರಿಕೊಪ್ಪ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕರೆಂಟ್ ಇರಲ್ಲ.
ಎರಡು ದಿನ ಕರೆಂಟ್ ಇರಲ್ಲ
ನವೆಂಬರ್-19 ಮತ್ತು 20 ರಂದು ಬೆಳಗ್ಗೆ 10.00 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕುಂಸಿ ಮೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















