ಶಿವಮೊಗ್ಗ ನಗರದ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

ಶಿವಮೊಗ್ಗ: ನಗರ ಉಪವಿಭಾಗ-2ರ ಘಟಕ -6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಜು.17 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಈ ಸುದ್ದಿಯನ್ನು ಇನ್ನು 32 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದಿಂದ ಮೊದಲ ಎಚ್ಚರಿಕೆ, ಯಾವುದೇ ಸಂದರ್ಭ ಗೇಟ್‌ಗಳ ಮೂಲಕ ನೀರು ಹೊರಕ್ಕೆ

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶ್ರಯ ಬಡಾವಣೆ, ಚಾಲುಕ್ಯನಗರ, ಕೆ.ಹೆಚ್.ಬಿ.ಕಾಲೋನಿ, ಹಳೆ ಊರು ಗೋಪಿಶೆಟ್ಟಿಕೊಪ್ಪ, ಗದ್ದೆಮನೆ ಲೇಔಟ್, ಮಂಜಪ್ಪ ಬಸಪ್ಪ ಲೇಔಟ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

power cut mescom ELECTRICITY

Leave a Comment