ಶಿವಮೊಗ್ಗ: ಜಿಲ್ಲೆಯಲ್ಲಿ ಈವರೆಗು ಏನೇನಾಯ್ತು? ಇಲ್ಲಿದೆ ಸ್ಪೀಡ್ ನ್ಯೂಸ್. (Speed News)
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ರೈತರಿಗೆ ನಿರಂತರ ಲಾಭ ಸಾಧ್ಯ
ಶಿವಮೊಗ್ಗ: ಜಿಲ್ಲೆಯಲ್ಲಿ ರೈತ ಉತ್ಪಾದಕ ಕಂಪನಿಗಳ (ಎಫ್‌ಪಿ) ಸ್ಥಿತಿಗತಿ ಹಾಗೂ ಸಮಸ್ಯೆಗಳ ಕುರಿತು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕಾರ್ಯಾಗಾರ ಉದ್ಘಾಟಿಸಿದರು.
ಚುನಾವಣೆಯ ಬಹಿಷ್ಕಾರದ ಎಚ್ಚರಿಕೆ
ಶಿಕಾರಿಪುರ: ಪಟ್ಟಣದಲ್ಲಿ ಒಳಮೀಸಲಾತಿ ವಿರೋಧಿಸಿ ಬಂಜಾರ ಸಮುದಾಯದವರು ಪ್ರತಿಭಟನೆ ನಡೆಸಿದರು. ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಗಣಪತಿ ಮೆರವಣಿಗೆ ವೇಳೆ ಜನರೇಟರ್ ಸ್ಪೋಟ
ಸಾಗರ: ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಳೆದ ರಾತ್ರಿ ಜನರೇಟರ್ ಸ್ಪೋಟಗೊಂಡು ಯುವಕನಿಗೆ ಗಾಯ. ಸಾಗರದ ಡಿಗಟೆಕೊಪ್ಪದಲ್ಲಿ ಘಟನೆ. ಲೋಕೇಶ್ ಎಂಬವವರು ಗಾಯಗೊಂಡಿದ್ದಾರೆ. ಕೂಡಲೆ ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಭದ್ರಾವತಿ ಹೊಸ ಸೇತುವೆ ಮತ್ತೆ ಬಂದ್
ಭದ್ರಾವತಿ: ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಟ್ಟಿದ್ದರಿಂದ ನಗರದ ಹೊಸ ಸೇತುವೆ ಮೇಲೆ ವಾಹನ ಸಂಚಾರ ಬಂದ್ ಮಾಡಲಾಗಿದೆ. ಬ್ಯಾರಿಕೇಡ್‌ಗಳನ್ನು ಅಳವಡಿಸಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಈ ಮಳೆಗಾಲದಲ್ಲಿ ಮೂರನೇ ಬಾರಿ ಸೇತುವೆ ಬಂದ್ ಮಾಡಲಾಗಿದೆ.
ಆನೆ ಕಂದಕಕ್ಕೆ ಬಿದ್ದು ವ್ಯಕ್ತಿ ಸಾವು
ಶಿವಮೊಗ್ಗ: ಆನೆ ನಿಯಂತ್ರಣಕ್ಕೆ ಅರಣ್ಯ ಇಲಾಖೆ ತೆಗೆದಿದ್ದ ಟ್ರಂಚ್‌ಗೆ (Trench) ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ತಮ್ಮಡಿಹಳ್ಳಿ ಸಮೀಪದ ಆಡಿನಕೊಟ್ಟಿಗೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ದೇವಸ್ಥಾನದಿಂದ ಮನೆ ಬಾರದ ಹಿನ್ನೆಲೆ ಹುಡುಕಾಟ ನಡೆಸಿದಾಗ ಗುಂಡಿಯಲ್ಲಿ ಮೃತದೇಹ ಪತ್ತೆಯಾಗಿದೆ. ನಾಗರಾಜ್ (32) ಎಂಬುವವರು ಮೃತಪಟ್ಟಿದ್ದಾರೆ.

ತೋಟಕ್ಕೆ ತೆರಳುವಾಗ ಕರಡಿ ದಾಳಿ, ವ್ಯಕ್ತಿಗೆ ಗಾಯ
ಭದ್ರಾವತಿ: ತೋಟಕ್ಕೆ ನಡೆದು ಹೋಗುತ್ತಿದ್ದ ವ್ಯಕ್ತಿ ಮೇಲೆ ಕರಡಿ (Bear) ದಾಳಿ ನಡೆಸಿದೆ. ಗಾಯಗೊಂಡಿದ್ದ ವ್ಯಕ್ತಿಯನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ತಾಲೂಕು ಮಾವಿನಕೆರೆ ಬಳಿ ಘಟನೆ ಸಂಭವಿಸಿದೆ. ಮಧುಸೂದನ್ (38) ಎಂಬುವವರ ಮೇಲೆ ಕರಡಿ ದಾಳಿ ಮಾಡಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸರ್ಕಾರಿ ಆಂಬುಲೆನ್ಸ್ ಚಾಲಕನಿಗೆ ₹10,000 ದಂಡ, ಕಾರಣವೇನು?
‘ಧರ್ಮಸ್ಥಳಕ್ಕೆ ಪಾದಯಾತ್ರೆ ಹಾಸ್ಯಾಸ್ಪದ’
ಶಿವಮೊಗ್ಗ: ಎಸ್‌ಐಟಿ ರಚನೆ ಮೂಲಕ ಧರ್ಮಸ್ಥಳಕ್ಕೆ ಹತ್ತಿದ್ದ ಕಳಂಕ ತೊಳೆಯುತ್ತಿರುವುದು ರಾಜ್ಯದ ಕಾಂಗ್ರೆಸ್ ಸರ್ಕಾರ. ಆದರೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಈಗ ಅಲ್ಲಿಗೆ ಪಾದಯಾತ್ರೆ ಹೊರಟಿದ್ದಾರೆ. ಅದು ಹಾಸ್ಯಾಸ್ಪದ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಎಂದು ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧರ್ಮಸ್ಥಳ ಚಲೋಗೆ ಶಿವಮೊಗ್ಗದಿಂದ ನೂರಾರು ಜನ
ಸಾಗರ: ‘ಧರ್ಮಸ್ಥಳ ರಕ್ಷಿಸಿ, ಹಿಂದೂ ಧರ್ಮ ಉಳಿಸಿ’ ಘೋಷವಾಕ್ಯದೊಂದಿಗೆ ಸೆ. 1ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ನೈತಿಕ ಸ್ಥೈರ್ಯ ತುಂಬಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹರತಾಳು ಹಾಲಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಶಿವಮೊಗ್ಗ ಜಿಲ್ಲೆಯಲ್ಲಿ ಸೋಂಕು ಹರಡದಂತೆ ಎಚ್ಚರ ವಹಿಸಿʼ
ಶಿವಮೊಗ್ಗ: ರೋಗಬಾಧಿತ ಇಲಿ, ಹಂದಿ, ನಾಯಿ, ಕುದುರೆ, ಜಾನುವಾರುಗಳು ಮೂತ್ರದಲ್ಲಿನ ಬ್ಯಾಕ್ಟಿರಿಯವು ನೀರು, ಮಣ್ಣು, ಸಸ್ಯಗಳ ಮೂಲಕ ಮನುಷ್ಯರಿಗೆ ತಗುಲಿ ಮಾರಣಾಂತಿಕ ಲೆಪ್ರೋಸ್ಪೆರೋಸಿಸ್ ಸೋಂಕು ಹರಡಬಹುದು. ಹಾಗಾಗಿ ಸೋಂಕಿನ ನಿಯಂತ್ರಣಕ್ಕೆ ಎಲ್ಲ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
95 ಗ್ರಾಂ ಚಿನ್ನಾಭರಣ ಕದ್ದವರು ಅರೆಸ್ಟ್
ಭದ್ರಾವತಿ: ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಯ ಬೀರುವಿನಲ್ಲಿದ್ದ 95 ಗ್ರಾಂ ಬಂಗಾರದ ಆಭರಣ ಕಳವು ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು 7.82 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಕೆಂಗೇರಿ ನಿವಾಸಿ ಆರ್.ಮಂಜುಳಾ(21) ಮತ್ತು ಸುಜೈನ್ ಖಾನ್ (24 ) ಬಂಧಿತರು.
Shivamogga Speed News
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





