ಶಿಕಾರಿಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇವತ್ತು ಶಿಕಾರಿಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. (Tour)
ಬೆಳಗ್ಗೆ 9 ಗಂಟೆಗೆ ಶಿಕಾರಿಪುರದ ಬಿಜೆಪಿ ಕಾರ್ಯಾಲಯದಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿ ಸ್ಮೃತಿ ದಿನ, ಜಗನ್ನಾಥ ರಾವ್ ಜೋಶಿ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 9.30ಕ್ಕೆ ಶಿರಾಳಕೊಪ್ಪ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಹೆಚ್ಚು ಅಂಕ ಪಡೆದ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಬೆಳಗ್ಗೆ 10ಕ್ಕೆ ಹರಗಿ ಗ್ರಾಮ ಪಂಚಾಯಿತಿಯ ಸಹಸ್ರವಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಉದ್ಘಾಟನೆ. ಬೆಳಗ್ಗೆ 10.30 ರಿಂದ ಮಧ್ಯಾಹ್ನ 3.30ರವರಗೆ ತೊಗರ್ಸಿ, ಸುಣ್ಣದಕೊಪ್ಪ, ಶಿರಾಳಕೊಪ್ಪ ಮಹಾಶಕ್ತಿ ಕೇಂದ್ರಗಳ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4.30ಕ್ಕೆ ಸ್ಥಳೀಯ ಕಾರ್ಯಕ್ರಮದಲ್ಲಿ ವಿಜಯೇಂದ್ರ ಭಾಗವಹಿಸಲಿದ್ದಾರೆ. ರಾತ್ರಿ ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ರೈಲಿನಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆ.
ಇದನ್ನೂ ಓದಿ » NR ಪುರಕ್ಕೆ ತೆರಳಲು ಶಿವಮೊಗ್ಗದಲ್ಲಿ KSRTC ಬಸ್ ಹತ್ತಿ ಕುಳಿತ ಕಡೂರಿನ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200