SHIVAMOGGA LIVE NEWS, 3 DECEMBER 2024
ಶಿವಮೊಗ್ಗ : ಫೆಂಗಲ್ ಚಂಡಮಾರುತದ ಕಾರಣಕ್ಕೆ ಇನ್ನೆರಡು ದಿನ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಪಿಯು ಕಾಲೇಜುಗಳಿಗೆ ಇವತ್ತು ರಜೆ (Holiday) ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಈ ಸಂಬಂಧ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲೆಯಲ್ಲಿ ಡಿ.3 ಮತ್ತು 4ರಂದು ಆರೆಂಜ್ ಮತ್ತು ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತ ಕ್ರಮ ವಾಹಿಸಿದೆ ಎಂದು ತಿಳಿಸಿದ್ದಾರೆ.
ಡಿ.3ರಂದು ಶಿವಮೊಗ್ಗ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಇದನ್ನೂ ಓದಿ » ದಿನ ಭವಿಷ್ಯ | ಈ ರಾಶಿಯವರಿಗೆ ಇವತ್ತು ಕೆಲಸ ಸಿಗಲಿದೆ