ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 1 AUGUST 2024 : ಅತಿ ವೇಗ, ಅಡ್ಡಾದಿಡ್ಡಿ ವಾಹನ ಚಾಲನೆ, ಕ್ರಮಬದ್ಧವಲ್ಲದ ನಂಬರ್ ಪ್ಲೇಟ್ ಬಳಕೆ ಸೇರಿದಂತೆ ಸಂಚಾರ ನಿಮಯ ಉಲ್ಲಂಘಿಸುವವರ ವಿರುದ್ಧ ಇವತ್ತಿನಿಂದ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ (FINE) ಕೈಗೊಳ್ಳಲು ತೀರ್ಮಾನಿಸಿದ್ದಾರೆ.
ಈ ಸಂಬಂಧ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಆ.1ರಿಂದ ಜಿಲ್ಲೆಯಾದ್ಯಂತ ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಬಿಎನ್‌ಎಸ್ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗುತ್ತದೆ. ಶಿವಮೊಗ್ಗ ನಗರದ ವಿವಿಧೆಡೆ ಕ್ಯಾಮರಾಗಳಿವೆ. ಇವುಗಳ ಮೂಲಕ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಿ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು.
ಅತಿ ವೇಗದ ವಾಹನ ಚಾಲನೆ, ಕ್ರಮಬದ್ಧವಲ್ಲದ ನಂಬರ್ ಪ್ಲೇಟ್ ಬಳಕೆ, ಫುಟ್ ಪಾತ್ ಮೇಲೆ ವಾಹನ ಚಾಲನೆ ಸೇರಿದಂತೆ ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.
ಇದನ್ನೂ ಓದಿ ⇓
ಹೊಳೆಹೊನ್ನೂರಿನಲ್ಲಿ ಮನೆಗಳು ಜಲಾವೃತ, ಮಂಗೋಟೆ ಬಳಿ ರಸ್ತೆ ಮೇಲೆ ಹರಿದ ನೀರು, ಎಲ್ಲೆಲ್ಲಿ ಏನೇನಾಗಿದೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422