ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಜನವರಿ 2022
ಕರೋನ ಮೂರನೆ ಅಲೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಸಾವು ಸಂಭವಿಸಿದೆ. ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ, ವ್ಯಕ್ತಿಯೊಬ್ಬರು ಕರೋನಾಗೆ ಬಲಿಯಾಗಿದ್ದಾರೆ ಎಂದು ತಿಳಿಸಲಾಗಿದೆ.
ಕಳೆದೊಂದು ವಾರದಿಂದ ಕರೋನ ಸೋಂಕು ತೀವ್ರ ಸ್ವರೂಪದಲ್ಲಿ ಹರಡುತ್ತಿದೆ. ಈ ಮಧ್ಯೆ ವ್ಯಕ್ತಿಯೊಬ್ಬರು ಸೋಂಕಿಗೆ ಬಲಿಯಾಗಿರುವುದು ಜಿಲ್ಲೆಯಲ್ಲಿಆತಂಕಕ್ಕೆ ಕಾರಣವಾಗಿದೆ. ಹಾಗಾಗಿ, ಈವರೆಗೂ ಜಿಲ್ಲೆಯಲ್ಲಿ ಕರೋನಾಗೆ ಬಲಿಯಾದವರ ಸಂಖ್ಯೆ 1073ಕ್ಕೆ ಏರಿಕೆಯಾಗಿದೆ.
ಇವತ್ತೆಷ್ಟು ಮಂದಿಗೆ ಪಾಸಿಟಿವ್?
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 260 ಮಂದಿಗೆ ಕರೋನ ಸೋಂಕು ತಗುಲಿದೆ. ಈ ಪೈಕಿ 131 ಮಂದಿ ಶಿವಮೊಗ್ಗ ತಾಲೂಕಿಗೆ ಸೇರಿದವರಾಗಿದ್ದಾರೆ. ಭದ್ರಾವತಿಯ 48, ತೀರ್ಥಹಳ್ಳಿಯ 17, ಶಿಕಾರಿಪುರದ 17, ಸಾಗರದ 26, ಹೊಸನಗರದ 5, ಸೊರಬದ 4, ಹೊರ ಜಿಲ್ಲೆಯಿಂದ ಬಂದಿರುವ 12 ಮಂದಿಗೆ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಡಳಿತದ ವರದಿಯಲ್ಲಿ ತಿಳಿಸಲಾಗಿದೆ.
ಗುಣವಾದರ ಸಂಖ್ಯೆಯಲ್ಲಿ ಏರಿಕೆ
ಮತ್ತೊಂದೆಡೆ ಜಿಲ್ಲೆಯಲ್ಲಿ ಸೋಂಕಿನಿಂದ ಗುಣವಾದವರ ಸಂಖ್ಯೆಯಲ್ಲಿ ಭಾರಿ ಎರಿಕೆಯಾಗುತ್ತಿದೆ. ಇದು ತುಸು ನೆಮ್ಮದಿ ಮೂಡಿಸಿದೆ. ಇವತ್ತು ಪಾಸಿಟಿವ್ ಪ್ರಕರಣಗಳಿಗಿಂತಲೂ ಗುಣವಾದವರ ಸಂಖ್ಯೆ ಹೆಚ್ಚಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 277 ಮಂದಿ ಕರೋನಾದಿಂದ ಗುಣವಾಗಿದ್ದಾರೆ.
ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಸಕ್ರಿಯ
ದೊಡ್ಡ ಪ್ರಮಾಣದಲ್ಲಿ ಸೋಂಕಿತರು ಗುಣವಾದರೂ ಶಿವಮೊಗ್ಗ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದೂವರೆ ಸಾವಿರಕ್ಕಿಂತಲೂ ಹೆಚ್ಚಿದೆ. ಸದ್ಯ ಜಿಲ್ಲೆಯಲ್ಲಿ 1611 ಸಕ್ರಿಯ ಕರೋನ ಪ್ರಕರಣಗಳಿವೆ. ಈ ಪೈಕಿ 55 ಸೋಂಕಿತರು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 40 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಡಿಸಿಹೆಚ್’ಸಿಯಲ್ಲಿ 30, ಟ್ರಯೇಜ್ ಸೆಂಟರ್’ನಲ್ಲಿ 19 ಸೋಂಕಿತರಿದ್ದಾರೆ. 1467 ಮಂದಿ ಹೋಮ್ ಐಸೊಲೇಷನ್’ಗೆ ಒಳಗಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ದಿನೇ ದಿನೇ ಸೋಂಕಿತರ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಈ ಮಧ್ಯೆ ಮೂರನೆ ಅಲೆಗೆ ಸೋಂಕಿತರೊಬ್ಬರು ಬಲಿಯಾಗಿರುವುದು ಜನರಲ್ಲಿ ಭಯ ಮೂಡಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422