ಶಿವಮೊಗ್ಗ ಲೈವ್.ಕಾಂ | SHIMOGA NEWS | 2 JUNE 2021
ಶಿವಮೊಗ್ಗದ ಜಿಲ್ಲೆಯಾದ್ಯಂತ ಮೀನುಗಾರಿಕೆ ಸಂಪೂರ್ಣ ನಿಷೇಧಿಸಿ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜೂನ್ 1 ರಿಂದ ಜುಲೈ 31ರವರೆಗೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಜಲಾಶಯಗಳು, ನದಿ ಭಾಗಗಳಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಮಳೆಗಾಲದಲ್ಲಿ ಮೀನುಗಳ ಸಂತಾನೋತ್ಪತ್ತಿಯ ಸಮಯವಾಗಿರುತ್ತದೆ. ಆದ್ದರಿಂದ ಈ ಅವಧಿಯಲ್ಲಿ ರಾಜ್ಯಾದ್ಯಂತ ಮೀನುಗಾರಿಕೆ ನಿಷೇಧಿಸಲಾಗುತ್ತದೆ.
ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]