ಇಂದಿನಿಂದ ಶಿವಮೊಗ್ಗದ ಅಂಗನವಾಡಿ, ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಆಯೋಗ ಹಠಾತ್ ಭೇಟಿ

ಶಿವಮೊಗ್ಗ: ರಾಜ್ಯ ಆಹಾರ ಆಯೋಗವು (Food Commission) ಡಿ.8 ರಿಂದ 11 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ (Inspections) ಕೈಗೊಳ್ಳಲಿದೆ. ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ನ್ಯಾಯಬೆಲೆ ಅಂಗಡಿ, ಆಹಾರ ಧ್ಯಾನ್ಯ ಸಗಟು ಮಳಿಗೆ, ಅಂಗನವಾಡಿ ಕೇಂದ್ರ, ಎಂ.ಎಸ್.ಪಿ.ಟಿ.ಸಿ., ಮಧ್ಯಾಹ್ನ  ಉಪಹಾರ ಯೋಜನೆ, ಜಿಲ್ಲಾ ಆಸ್ಪತ್ರೆಯಲ್ಲಿರುವ ಎನ್.ಆರ್.ಸಿ. ಘಟಕ, ಹಾಗೂ ವಿವಿಧ ಇಲಾಖೆಗಳ ಪರೀಶೀಲನೆ ನಡೆಸಲಿದೆ.‌➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ » ದೇಶದ ಟಾಪ್‌ 10 ನಗರಗಳ ಪಟ್ಟಿಯಲ್ಲಿ ಶಿವಮೊಗ್ಗಕ್ಕೆ 6ನೇ ಸ್ಥಾನ, ಮೈಸೂರು, ಬೆಂಗಳೂರಿಗಿಂತಲು ಉತ್ತಮ

ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಯೊಂದಿಗೆ ಸಭೆಯನ್ನು ನಡೆಸಿ ಸಾರ್ವಜನಿಕರಿಂದ ಅಹವಾಲು (public grievance) ಸ್ವೀಕಾರ ಮಾಡಲಿದ್ದಾರೆ. ಆಯೋಗದ ಪ್ರವಾಸದಲ್ಲಿ ಅಧ್ಯಕ್ಷ ಡಾ. ಹೆಚ್. ಕೃಷ್ಣ, ಸದಸ್ಯರಾದ ಲಿಂಗರಾಜ ಕೋಟೆ, ಸುಮಂತ್ ರಾವ್, ಮಾರುತಿ ಎಂ ದೊಡ್ಡಲಿಂಗಣ್ಣವರ, ಎ. ರೋಹಿಣಿ ಪ್ರಿಯ ಮತ್ತು ಕೆ.ಎಸ್.ವಿಜಯಲಕ್ಷ್ಮೀ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಗದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment