ಪರಿಶಿಷ್ಟ ಜಾತಿಯ ವಿವಿಧ ಸಮುದಾಯಗಳಿಂದ ಆನ್‌ಲೈನ್‌ ಅರ್ಜಿ ಆಹ್ವಾನ, ನ.28ಕ್ಕೆ ಕೊನೆಯ ದಿನ

ಶಿವಮೊಗ್ಗ: ಡಾ.ಬಾಬು ಜನಜೀವನ ರಾಮ್‌ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಆದಿ ಕರ್ನಾಟಕ, ಆದಿ ಮಾದಿಗ, ಚಮ್ಮಾರ, ಡೋರ, ಸಮಗಾರ ಮೋಚಿ ಜನಾಂಗದವರಿಗೆ 2025– 26ನೇ ಸಾಲಿನ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. (ಈ ಸುದ್ದಿಯನ್ನು ಇನ್ನು 33 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಸ್ವಾವಲಂಬಿ/ ಸಂಚಾರ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಚರ್ಮಶಿಲ್ಪಿ ಯೋಜನೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ, ವಸತಿ ಯೋಜನೆ ಹಾಗೂ ಕೌಶಲ ಅಭಿವೃದ್ಧಿ ಮತ್ತು ಆದಾಯ ಗಳಿಕೆ ತರಬೇತಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ ಲಿಂಕ್ ಮೂಲಕ ನ. 28ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 93805 01076ನ್ನು ಸಂಪರ್ಕಿಸುವಂತೆ ಲಿಡ್ಕರ್ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Just-Mahithi-Update-Shimoga-News