ಶಿವಮೊಗ್ಗ LIVE
ಶಿವಮೊಗ್ಗ: ವಿದೇಶದ ಐಟಿ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಶಿವಮೊಗ್ಗ ಜಿಲ್ಲೆಯ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರಿಗೆ ₹2,58,000 ವಂಚನೆ ಮಾಡಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದ ಸಾಫ್ಟ್‌ವೇರ್ ಇಂಜಿನಿಯರ್ ಆನ್‌ಲೈನ್ ಮೂಲಕ ವಿದೇಶಗಳಲ್ಲಿ ಉದ್ಯೋಗ ಹುಡುಕುತ್ತಿದ್ದ ಸಂದರ್ಭ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಕರೆ ಬಂದಿತ್ತು. ಆ ವ್ಯಕ್ತಿ ವಿವಿಧ ಐಟಿ ಕಂಪನಿಗಳಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿದ್ದ. ಅದಕ್ಕಾಗಿ 2 ರಿಂದ 3 ಲಕ್ಷ ರುಪಾಯಿವರೆಗೆ ಖರ್ಚಾಗಲಿದೆ ಎಂದು ಹೇಳಿದ್ದ. ನಂಬಿದ ಸಾಫ್ಟ್‌ವೇರ್ ಇಂಜಿನಿಯರ್, ತಮ್ಮ ರೆಸ್ಯೂಮ್ ಕಳುಹಿಸಿದ್ದರು. ಅಪರಿಚಿತ ವಿವಿಧ ಹಂತಗಳ ಪ್ರೊಸೆಸಿಂಗ್ ಫೀಸ್ ಮತ್ತು ಇತರೆ ಕಾರಣಗಳನ್ನು ಹೇಳಿ ಸಾಫ್ಟ್‌ವೇರ್ ಇಂಜಿನಿಯರ್ ಕಡೆಯಿಂದ ₹2,58,000 ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದ.

ಇದನ್ನೂ ಓದಿ » ಕೊನೆಗೂ ಎಚ್ಚೆತ್ತ ಅಧಿಕಾರಿಗಳು, ಶಿವಮೊಗ್ಗ ಲೈವ್ ನಿರಂತರ ವರದಿ ಬಳಿಕ ರಸ್ತೆ ಗುಂಡಿಗಳು ಬಂದ್
ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಕರೆ ಮಾಡಿದ ವ್ಯಕ್ತಿ ಇನ್ನೂ 2 ಲಕ್ಷ ರೂಪಾಯಿ ಹಣ ಹಾಕುವಂತೆ ಬೇಡಿಕೆ ಇಟ್ಟಿದ್ದರು. ಇದರಿಂದ ಸಾಫ್ಟ್‌ವೇರ್ ಇಂಜಿನಿಯರ್‌ಗೆ ಅನುಮಾನ ಬಂದಿದ್ದು, ತಾವು ಹಾಕಿದ ಹಣವನ್ನು ವಾಪಸ್ ನೀಡುವಂತೆ ಕೇಳಿದ್ದಾರೆ. ಆದರೆ ಅಪರಿಚಿತರು ಕರೆ ಕಡಿತಗೊಳಿಸಿ ನಂತರ ಸ್ವೀಕರಿಸಿಲ್ಲ. ವಂಚನೆಗೊಳಗಾದ ಅರಿವಾದ ಹಿನ್ನಲೆ ಸಾಫ್ಟ್‌ವೇರ್ ಇಂಜಿನಿಯರ್ ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






