ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳ ದಾಳಿ, ಬೇಟೆಯಾಡಿದ್ದ ಮಾಲು ಸಹಿತ ಆರೋಪಿ ಅರೆಸ್ಟ್‌

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

HOSANGARA, 17 AUGUST 2024 : ಖಚಿತ ಮಾಹಿತಿ ಮೇರೆಗೆ ದಾಳಿ (Raid) ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾರು ಬೆಕ್ಕು ಬೇಟೆಯಾಡಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಹೊಸನಗರ ತಾಲೂಕು ನಗರ ವಲಯ ಅರಣ್ಯ ವ್ಯಾಪ್ತಿಯ ಹುಂಚ ಹೋಬಳಿ ಬಾಳೆಕೊಪ್ಪ ಗ್ರಾಮದಲ್ಲಿ ದಾಳಿ ನಡೆಸಲಾಗಿದೆ. ಮಾಲು ಸಹಿತ ಆರೋಪಿ ಸತೀಶ್‌ ಎಂಬಾತನನ್ನು ಬಂಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕೆಂಚಪ್ಪನವರ್ ಮಾರ್ಗದರ್ಶನದಲ್ಲಿ, ಹೊಸನಗರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್ ನಿರ್ದೇಶನದಂತೆ, ನಗರ ವಲಯ ಅರಣ್ಯಾಧಿಕಾರಿ ಮಲ್ಲನಗೌಡ, ಉಪವಲಯ ಅರಣ್ಯಾಧಿಕಾರಿಗಳಾದ ಟಿ.ಪಿ.ನರೇಂದ್ರ ಕುಮಾರ್, ಸತೀಶ್, ಸತೀಶ್ ನಾಯಕ್, ಅಮೃತ ಸುಂಕದ್, ಗಸ್ತು ಅರಣ್ಯ ರಕ್ಷಕರಾದ ಯೋಗರಾಜ್, ಆಂಜನೇಯ, ಮನೋಜ್ ಹಾಗು ವಾಹನ ಚಾಲಕ ರಾಮು ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

nagara-divison-forest-officials-arrest-one-for-hunting

ಇದನ್ನೂ ಓದಿ ⇒ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂದೆ ರಾತ್ರೋರಾತ್ರಿ ಪ್ರತ್ಯಕ್ಷವಾಗುತ್ತೆ ಫಲಕ, ಇದನ್ನು ಹಾಕೋದ್ಯಾರು ಗೊತ್ತಾ?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment