ಕರ್ಫ್ಯೂ ಮೊದಲ ದಿನವೇ ಶಿವಮೊಗ್ಗ ಜಿಲ್ಲೆಯಲ್ಲಿ 400+ ಕರೋನ ಪಾಸಿಟಿವ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 APRIL 2021

ಕರೋನ ತಡೆಗೆ ಲಾಕ್​ಡೌನ್ ಮಾದರಿ ಕರ್ಫ್ಯೂ ಜಾರಿಯಾದ ಮೊದಲ ದಿನವೇ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಸೋಂಕಿತರು ಪತ್ತೆಯಾಗಿದ್ದಾರೆ. ಅಲ್ಲದೆ ಸೋಂಕಿಗೆ ತುತ್ತಾಗಿ ಮೃತರಾದವರ ಸಂಖ್ಯೆಯು ಏರಿಕೆಯಾಗಿದೆ.

Covid 19 Vaccination Kan poster 1 1

ಜಿಲ್ಲೆಯಲ್ಲಿ ಇವತ್ತು 457 ಮಂದಿಗೆ ಸೋಂಕು ತಗುಲಿದೆ. ಒಂದೇ ದಿನ ಇಷ್ಟೊಂದು ಮಂದಿಗೆ ಜಿಲ್ಲೆಯಲ್ಲಿ ಸೋಂಕು ತಗುಲಿದ್ದು ಇದೆ ಮೊದಲಾಗಿದೆ. ಇನ್ನು ಸೋಂಕಿಗೆ ತುತ್ತಾಗಿ ಇವತ್ತು ಐವರು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಇವತ್ತು 2399 ಮಂದಿಯ ಸ್ಯಾಂಪಲ್ ಪಡೆಯಲಾಗಿದೆ. 2502 ಮಂದಿ ಸ್ಯಾಂಪಲ್ ನೆಗೆಟಿವ್ ಬಂದಿದೆ.

ಯಾವ್ಯಾವ ತಾಲೂಕಿನಲ್ಲಿ ಎಷ್ಟು ಕೇಸ್

ಶಿವಮೊಗ್ಗ ತಾಲೂಕಿನಲ್ಲಿ 240, ಭದ್ರಾವತಿ 39, ಶಿಕಾರಿಪುರ 56, ತೀರ್ಥಹಳ್ಳಿ 30, ಸೊರಬ 45, ಸಾಗರ 14, ಹೊಸನಗರ 12, ಇತರೆ ಜಿಲ್ಲೆಯಿಂದ ಬಂದವರು 21 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಈಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2152ಕ್ಕೆ ಏರಿಕೆಯಾಗಿದೆ. ಈ ಪೈಕಿ 295 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 12 ಮಂದಿ ಕೋವಿಡ್ ಕೇರ್ ಸೆಂಟರ್​ನಲ್ಲಿ, 268 ಮಂದಿ ಖಾಸಗಿ ಆಸ್ಪತ್ರೆಯಲ್ಲಿ, 32 ಮಂದಿ ಟ್ರಯೇಜ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  1545 ಮಂದಿ ಹೋಂ ಐಸೊಲೇಷನ್​ಗೆ ಒಳಗಾಗಿದ್ದಾರೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್​ನಲ್ಲಿ ತಿಳಿಸಲಾಗಿದೆ.

ಈ ನಡುವೆ ಜಿಲ್ಲೆಯಲ್ಲಿ ಇವತ್ತು 296 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment