ಕುರಿ ಸಾಕಾಣಿಕೆ ಉಚಿತ ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಡಿಟೇಲ್ಸ್

ಶಿವಮೊಗ್ಗ: ಬೆಂಗಳೂರಿನ ಹೊಸಕೋಟೆ ತಾಲೂಕಿನ ಹಸಿಗಾಳ ಅಂಚೆಯ ಸೊಣ್ಣಹಳ್ಳಿಪುರ ಗ್ರಾಮದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗಾಗಿ 13 ದಿನಗಳ ಕಾಲಾವಧಿಯ ಉಚಿತ ಕುರಿ ಸಾಕಾಣಿಕೆ ತರಬೇತಿ ಶಿಬಿರ ಆಯೋಜಿಸಲಾಗಿದೆ. (ಈ ಸುದ್ದಿಯನ್ನು ಇನ್ನು 54 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಅಕ್ಟೋಬರ್ 7ರಿಂದ ತರಬೇತಿ ಆರಂಭವಾಗಲಿದೆ. ಶಿಬಿರದಲ್ಲಿ ಕುರಿ ಸಾಕಾಣಿಕೆ ಜೊತೆಗೆ ವೈಜ್ಞಾನಿಕ ರೀತಿಯಲ್ಲಿ ಹಸು, ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ, ತೋಟಗಾರಿಕಾ ಬೆಳೆಗಳ ಬೇಸಾಯ ಮತ್ತು ಸಾವಯವ ಗೊಬ್ಬರ ತಯಾರಿಕೆಯ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಉಚಿತವಾಗಿ ಬೋಧನೆ ಮಾಡಿಸಲಾಗುವುದು.

Just-Mahithi-Update-Shimoga-News

18 ರಿಂದ 49 ವರ್ಷ ವಯೋಮಿತಿಯ ನಿರುದ್ಯೋಗಿಗಳು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ. ಗ್ರಾಮೀಣ ಭಾಗದ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತಿದೆ. ಕೇವಲ 35 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮೊದಲು ಬಂದವರಿಗೆ ಮೊದಲ ಆದ್ಯತೆಯ ಆಧಾರದ ಮೇಲೆ ಆಯ್ಕೆ ನಡೆಯಲಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಆಯ್ಕೆಯಾದ ಶಿಬಿರಾರ್ಥಿಗಳಿಗೆ ಉಚಿತ ತರಬೇತಿ, ಊಟ ಹಾಗೂ ವಸತಿ ಸೌಲಭ್ಯ ಒದಗಿಸಲಾಗುತ್ತದೆ. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಅಧಿಕೃತ ಪ್ರಮಾಣ ಪತ್ರ ವಿತರಿಸಲಾಗುವುದು. ಆಸಕ್ತರು ಪಡಿತರ ಚೀಟಿ, ಆಧಾರ್ ಕಾರ್ಡ್ ಹಾಗೂ 4 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ತರಬೇತಿ ಸಂಸ್ಥೆಗೆ ನೇರವಾಗಿ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9886935603, 9591514154, 8970476050, 9686248369 ಅಥವಾ 6363139123 ಸಂಪರ್ಕಿಸಬಹುದಾಗಿದೆ.