ರೈತರೆ ಗಮನಿಸಿ, ಒಂದು ದಿನದ ಉಚಿತ ತರಬೇತಿ, 25 ಮಂದಿಗೆ ಮಾತ್ರ ಅವಕಾಶ, ಏನಿದು? ನೋಂದಣಿ ಹೇಗೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ನಗರದ ಪಶುವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ಗ್ರಾಮೀಣ ಪ್ರದೇಶದ ರೈತರು, ರೈತ ಮಹಿಳೆಯರು ಹಾಗೂ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಆಗಸ್ಟ್‌ 10ರಂದು ದೇಶಿ ಮತ್ತು ಮಿಶ್ರ ಹೈನು ತಳಿಗಳ ವೈಜ್ಞಾನಿಕ ಪಾಲನೆ ಮತ್ತು ಪೋಷಣೆ ಕುರಿತು ಒಂದು ದಿನದ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ.

ವಿನೋಬನಗರದ ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿರುವ ಜಾನುವಾರು ಸಾಕಾಣಿಕೆ ಸಂಕೀರ್ಣದ ಮಲೆನಾಡು ಗಿಡ್ಡ ತಳಿ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ಈ ತರಬೇತಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ತರಬೇತಿಯಲ್ಲಿ ಏನೇನಿರುತ್ತೆ?

point-1

ತರಬೇತಿಯಲ್ಲಿ ದೇಶಿ ಹಸು ತಳಿಗಳು, ಹಸುಗಳ ಕೊಟ್ಟಿಗೆ ನಿರ್ಮಾಣ ಹಾಗೂ ಆಹಾರ ನಿರ್ವಹಣೆ ಬಗ್ಗೆ ಮಾಹಿತಿ ನೀಡಲಾಗುತ್ತದೆ.

Agriculture-News-Farmer

point-2

ಸಂತಾನೋತ್ಪತ್ತಿ, ರೋಗಗಳು ಹಾಗೂ ಮಾರುಕಟ್ಟೆ ವ್ಯವಸ್ಥೆ ಕುರಿತು ವಿಶೇಷ ಮಾಹಿತಿ ಮತ್ತು ಪ್ರಾಯೋಗಿಕ ಪ್ರಾತ್ಯಕ್ಷತೆ ಇರಲಿದೆ.

ತಾನೋತ್ಪತ್ತಿ, ರೋಗಗಳು ಹಾಗೂ ಮಾರುಕಟ್ಟೆ ವ್ಯವಸ್ಥೆ ಕುರಿತು ವಿಶೇಷ ಮಾಹಿತಿ ಮತ್ತು ಪ್ರಾಯೋಗಿಕ ಪ್ರಾತ್ಯಕ್ಷತೆ ಇರಲಿದೆ.

ನೋಂದಣಿ ಮಾಡಿಕೊಳ್ಳುವುದು ಹೇಗೆ?

ತರಬೇತಿಯು 25 ಶಿಬಿರಾರ್ಥಿಗಳಿಗೆ ಸೀಮಿತವಾಗಿದ್ದು, ಮೊದಲು ಹೆಸರು ನೋಂದಾಯಿಸಿದವರಿಗೆ ಆದ್ಯತೆ ನೀಡಲಾಗುತ್ತದೆ. ಆಸಕ್ತರು ಆಗಸ್ಟ್ 8ರೊಳಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಪಶುವೈದ್ಯಕೀಯ ಮಹಾವಿದ್ಯಾಲಯದ ಜಾನುವಾರು ಸಾಕಾಣಿಕೆ ಸಂಕೀರ್ಣದ ಸಹ ಪ್ರಾಧ್ಯಾಪಕರಾದ ಡಾ. ಸತೀಶ್ ಜಿ.ಎಮ್. ಅವರನ್ನು 9448224595, 9916208462 ಅಥವಾ 9113938922 ಸಂಪರ್ಕಿಸಬಹುದು ಎಂದು ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.