ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 2 ಏಪ್ರಿಲ್ 2020
ಕರೋನ ಲಾಕ್’ಡೌನ್’ನಿಂದಾಗಿ ಬೆಳೆ ಹಾಳಾಗುವ ಭೀತಿಯಲ್ಲಿದ್ದ ರೈತರಿಗೆ ಶಿವಮೊಗ್ಗ ಜಿಲ್ಲಾಡಳಿತ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ. ತಾವು ಬೆಳೆದ ಬೆಳೆಯನ್ನು ರೈತರು ಮಾರುಕಟ್ಟೆಗೆ ಸಾಗಿಸಲು ಅವಕಾಶ ಕಲ್ಪಿಸುವುದಾಗಿ ಜಿಲ್ಲಾಡಳಿತ ತಿಳಿಸಿದೆ.
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು, ಶಿವಮೊಗ್ಗ ಜಿಲ್ಲೆಯ ರೈತರು ಬೆಳೆದ ಹಣ್ಣು, ತರಕಾರಿ ಸರಬರಾಜಿಗೆ ಲಾಕ್’ಡೌನ್’ನಿಂದ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಳೆಗಾರರು ದಾಸ್ತಾನು ಮಾಡಿಕೊಂಡಿರುವ ಹಣ್ಣು, ತರಕಾರಿಯನ್ನು ಸ್ಥಳೀಯ ಮಾರುಕಟ್ಟೆ, ಜಿಲ್ಲೆ, ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ನಿಯಮಾನುಸಾರ ಸಾಗಿಸಲು ಮತ್ತು ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಸಗಟು ವ್ಯಾಪಾರಿಗಳು ರೈತರ ಬೆಳೆ ಖರೀದಿಸಿ, ಸಾಗಾಣಿಕೆ ಮಾಡಲೂ ಅನುಮತಿ ನೀಡಲಾಗಿದೆ. ಈ ವೇಳೆ ಕೆಲಸಕ್ಕೆ ಬರುವವರಿಗೆ ಮಾಸ್ಕ್, ಸ್ಯಾನಿಟೈಸರ್ ಒದಗಿಸುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422