ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SAGARA, 26 JULY 2024 : ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಲಿಂಗನಮಕ್ಕಿ ಜಲಾಶಯ (LINGANAMAKKI DAM) ಭರ್ತಿಯಾಗುವ ಹಂತಕ್ಕೆ ತಲುಪಿದೆ. ಜಲಾಶಯದ ನೀರಿನ ಮಟ್ಟ ಹೆಚ್ಚಳವಾದ ಹಿನ್ನೆಲೆ ಇವತ್ತು ಗಂಗೆ ಪೂಜೆ ನೆರವೇರಿಸಲಾಯಿತು. ಅಲ್ಲದೆ ಒಂದು ಗೇಟ್ ಮೂಲಕ ಸಾಂಪ್ರದಾಯಿಕವಾಗಿ ನೀರನ್ನು ಹೊರ ಬಿಡಲಾಯಿತು.
ಅಧಿಕಾರಿಗಳಿಂದ ಗಂಗೆ ಪೂಜೆ
ಲಿಂಗನಮಕ್ಕಿ ಜಲಾಶಯ ಭರ್ತಿಯಾಗುವ ಹಂತ ತಲುಪಿದ ಹಿನ್ನೆಲೆ ಇವತ್ತು ಕರ್ನಾಟಕ ವಿದ್ಯುತ್ ನಿಗಮದ ಅಧಿಕಾರಿಗಳು ಗಂಗೆ ಪೂಜೆ ನೆರವೇರಿಸಿದರು. ಜಲಾಶಯದಲ್ಲಿ ಪೂಜೆ ಸಲ್ಲಿಸಿ, ಬಳಿಕ ಶರಾವತಿ ನದಿಗೆ ಬಾಗಿನ ಅರ್ಪಿಸಿದರು.

ಗಂಗೆ ಪೂಜೆ ಬಳಿಕ ಲಿಂಗನಮಕ್ಕಿ ಜಲಾಶಯದ ಒಂದು ಕ್ರಸ್ಟ್ ಗೇಟನ್ನು ಮೇಲೆತ್ತಿ, ಸ್ವಲ್ಪ ಹೊತ್ತು ನೀರು ಹೊರಗೆ ಬಿಡುವ ಸಂಪ್ರದಾಯವಿದೆ. ಅದರಂತೆ ಇವತ್ತು ಜಲಾಶಯದ ಕ್ರಸ್ಟ್ ಗೇಟನ್ನು ಮೇಲೆತ್ತಿ ನೀರನ್ನು ಹರಿಸಲಾಯಿತು. ಈ ವೇಳೆ ವಿದ್ಯುತ್ ನಿಗಮದ ಸಿಬ್ಬಂದಿಗಳು, ಕುಟುಂಬದವರು ಸಂಭ್ರಮ ವ್ಯಕ್ತಪಡಿಸಿದರು.
ಎಷ್ಟು ಭರ್ತಿಯಾಗಿದೆ ಲಿಂಗನಮಕ್ಕಿ?
ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದೆ. ಕಳೆದ ಒಂದು ವಾರದಿಂದ ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಪ್ರಸ್ತುತ ಜಲಾಶಯ ಶೇ.71.43ರಷ್ಟು ಭರ್ತಿಯಾಗಿದೆ. ಇದೆ ರೀತಿ ಮಳೆ ಮುಂದುವರೆದರೆ ಕೆಲವೇ ದಿನದಲ್ಲಿ ಲಿಂಗನಮಕ್ಕಿ ಡ್ಯಾಂ ಭರ್ತಿಯಾಗಲಿದ್ದು, ಕ್ರಸ್ಟ್ ಗೇಟ್ಗಳ ಮೂಲಕ ನೀರನ್ನು ಹೊಳೆಗೆ ಹರಿಸಲಾಗುತ್ತದೆ.

ಇವತ್ತು ಲಿಂಗನಮಕ್ಕಿ ಜಲಾಶಯಕ್ಕೆ 65,147 ಸಾವಿರ ಕ್ಯೂಸೆಕ್ ನೀರು ಒಳ ಹರಿವು ಇದೆ. ಜಲಾಶಯದ ಗರಿಷ್ಠ ಮಟ್ಟ 1819 ಅಡಿ ಇದೆ. ಈಗ 1804.80 ಅಡಿಯಷ್ಟು ನೀರು ಭರ್ತಿಯಾಗಿದೆ. ನೀರಿನ ಮಟ್ಟ 1816 ಅಡಿಗೆ ತಲುಪಿದಾಗ ಜಲಾಶಯದ ಮೂಲಕ ನೀರನ್ನು ಹೊರ ಬಿಡಲಾಗುತ್ತದೆ.

ಮುನ್ನೆಚ್ಚರಿಕೆ ನೀಡಿದ ನಿಗಮ
ಲಿಂಗನಮಕ್ಕಿ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾದ ಹಿನ್ನೆಲೆ, ಜಲಾಶಯದ ವತಿಯಿಂದ ಅಲರ್ಟ್ ಘೋಷಣೆ ಮಾಡಲಾಗಿದೆ. ಯಾವುದೆ ಸಂದರ್ಭ ಜಲಾಶಯದಿಂದ ನೀರ ಹೊರ ಬಿಡುವ ಸಾಧ್ಯತೆ ಇದೆ. ಹಾಗಾಗಿ ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸಬೇಕು. ಎತ್ತರದ ಪ್ರದೇಶದಕ್ಕೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ ⇓
BREAKING NEWS – ಹೆದ್ದಾರಿಯಲ್ಲಿ ಬಸ್ ಮೇಲೆ ಬಿದ್ದ ಮರ, ಚಾಲಕನ ಸಮಯಪ್ರಜ್ಞೆಗೆ ತಪ್ಪಿತು ಅನಾಹುತ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





