ಶಿವಮೊಗ್ಗ: ಹಿರಿಯರ ಪೂಜೆ ಸಂದರ್ಭ ಮನೆಯಲ್ಲಿ ಕಳಶಕ್ಕೆ ಹಾಕಿದ್ದ ಬಂಗಾರದ ಸರ (Gold Chain) ನಾಪತ್ತೆಯಾಗಿದೆ. ಶಿವಮೊಗ್ಗದ ವಿದ್ಯಾನಗರದ ಶಶಿಕುಮಾರ್ ಎಂಬುವವರ ಮನೆಯಲ್ಲಿ ಘಟನೆಯಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಶಿಕುಮಾರ್ ಅವರ ಮನೆಯಲ್ಲಿ ಹಿರಿಯರ ಪೂಜೆ ವೇಳೆ ಅವರ ತಾಯಿಯ ಬಂಗಾರದ ಸರವನ್ನು ಕಳಶಕ್ಕೆ ಸುತ್ತಿದ್ದರು. ರಾತ್ರಿ 7.30ರ ಬಳಿಕ ಸಂಬಂಧಿಕರು, ಸ್ನೇಹಿತರು ಸೇರಿ ಹಲವರು ಊಟಕ್ಕೆ ಬಂದಿದ್ದರು. ರಾತ್ರಿ 9.30ರ ಹೊತ್ತಿಗೆ ಕಳಶಕ್ಕೆ ಸುತ್ತಿದ್ದ ಚಿನ್ನದ ಸರ ನಾಪತ್ತೆಯಾಗಿತ್ತು ಎಂದು ಆರೋಪಿಸಲಾಗಿದೆ.
ಊಟಕ್ಕೆ ಬಂದವರಿಗೆ ವಿಚಾರಿಸಿದ ಶಶಿಕುಮಾರ್ ಅವರು ಬಳಿಕ ದೂರು ನೀಡಿದ್ದಾರೆ. 50 ಗ್ರಾಂ ತೂಕದ ಸುಮಾರು ₹4 ಲಕ್ಷ ಮೌಲ್ಯದ ಚಿನ್ನದ ಸರ ಕಳುವಾಗಿದೆ ಎಂದು ಆರೋಪಿಸಿದ್ದಾರೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಮಹಿಳಾ ಕಾಂಗ್ರೆಸ್‌ಗೆ ನೂತನ ಅಧ್ಯಕ್ಷೆ, ಪದಗ್ರಹಣದ ದಿನಾಂಕ ಪ್ರಕಟ
Gold Chain Missing
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






