ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ನವೆಂಬರ್ 2021
ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಥಾವರ್ ಚಂದ್ ಗೆಹ್ಲೋಟ್ ಅವರು ಇದೆ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಎರಡು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ.
ನ.24ರಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೊರಡುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ತುಮಕೂರು ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.45ರ ಹೊತ್ತಿಗೆ ಶಿವಮೊಗ್ಗಕ್ಕೆ ಆಗಮಿಸುವ ರಾಜ್ಯಪಾಲರು 3.20ಕ್ಕೆ ಸಾಗರ ರಸ್ತೆಯಲ್ಲಿರುವ ಪಿಇಎಸ್ ಕಾಲೇಜಿಗೆ ಭೇಟಿ ನೀಡಲಿದ್ದಾರೆ. ಕಾಲೇಜು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಲಯನ್ ಸಫಾರಿ, ಜೋಗಕ್ಕೆ ಭೇಟಿ
ಮಧ್ಯಾಹ್ನ 3.45ಕ್ಕೆ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ರಾಜ್ಯಪಾಲ ಥಾವರ್ ಸಿಂಗ್ ಗೆಹ್ಲೋಟ್ ಭೇಟಿ ನೀಡಲಿದ್ದಾರೆ. ಅಲ್ಲಿಂದ ಸಂಜೆ ಸಾಗರ ತಾಲೂಕು ಜೋಗಕ್ಕೆ ತಲುಪಲಿದ್ದಾರೆ. ರಾತ್ರಿ ಜೋಗದ ಬಾಂಬೆ ಗೆಸ್ಟ್ ಹೌಸ್’ನಲ್ಲಿಯೇ ರಾಜ್ಯಪಾಲರು ತಂಗಲಿದ್ದಾರೆ.
ಕೃಷಿ ವಿವಿ ಘಟಿಕೋತ್ಸವ
ನ.25ರಂದು ರಾಜ್ಯಪಾಲರು ಜೋಗದಿಂದ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಕೃಷಿ ಮತ್ತು ತೋಟಗಾರಿಗೆ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ರಾಜ್ಯಪಾಲರು ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳಸಲಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422