ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಅಕ್ಟೋಬರ್ 2021
ರಾಜ್ಯ ಸರ್ಕಾರಿ ನೌಕರರಿಗೆ ಬಾಕಿ ಇದ್ದ ತುಟ್ಟಿಭತ್ಯೆಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಶೇ.3ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತುಟ್ಟಿಭತ್ಯೆ ಬಿಡುಗಡೆ ಮಾಡಿದ ಹಿನ್ನೆಲೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮುಖ್ಯಮಂತ್ರಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಸರ್ಕಾರಿ ನೌಕರರ ಸಂಘ ಮನವಿ ನೀಡಿದ 24 ಗಂಟೆ ಅವಧಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುಟ್ಟಿಭತ್ಯೆ ಮಂಜೂರು ಮಾಡಿದ್ದಾರೆ. ಕೇಂದ್ರ ಸರ್ಕಾರಕ್ಕೆ ಸರಿಸಮಾನವಾಗಿ ರಾಜ್ಯ ಸರ್ಕಾರವು ತುಟ್ಟಿಭತ್ಯೆ ಮಂಜೂರು ಮಾಡಿದೆ ಎಂದು ಷಡಾಕ್ಷರಿ ತಿಳಿಸಿದ್ದಾರೆ.
ಜುಲೈ 1ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ.3ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಲಾಗಿದೆ.