ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಒನ್‌ ಕೇಂದ್ರಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲೆಯಲ್ಲಿ ಖಾಲಿ ಇರುವ 43 ಗ್ರಾಮ ಒನ್ ಕೇಂದ್ರಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. (ಈ ಸುದ್ದಿಯನ್ನು ಇನ್ನು 31 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಗ್ರಾಮೀಣ ಭಾಗದ ಜನರಿಗೆ ಸರ್ಕಾರದ ಹಲವಾರು ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸಲಾಗುತ್ತಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಈ ನೂತನ ಯೋಜನೆಗಳು ಅನುಷ್ಠಾನಗೊಳ್ಳುತ್ತಿವೆ.

SHIMOGA-NEWS-GRAPHICS-BY-SHIVAMOGGA-LIVE

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://Sevaone.karnataka.gov.in/services/login ಮೂಲಕ ಮಾತ್ರವೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ತಿಳಿಸಿದ್ದಾರೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2026ರ ನವೆಂಬರ್ 15 ಕೊನೆಯ ದಿನಾಂಕವಾಗಿದೆ ಎಂದು ತಿಳಿಸಲಾಗಿದೆ.