ಗೌರಿ – ಗಣೇಶ ಹಬ್ಬ, ಶಿವಮೊಗ್ಗ ಜಿಲ್ಲಾಧಿಕಾರಿಯಿಂದ 8 ಪಾಯಿಂಟ್‌ನ ಪ್ರಮುಖ ಆದೇಶ, ಏನೇನದು?

ಶಿವಮೊಗ್ಗ: ಗೌರಿ – ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಸರ್ಕಾರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನ ನೀಡಿದೆ. ಅದರಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹಬ್ಬ ಆಚರಣೆ ಕುರಿತು ಕೆಲವು ಸೂಚನೆಗಳನ್ನು (Guidelines) ನೀಡಿದ್ದಾರೆ. ➤ ಸುದ್ದಿಯ ಮುಂದಿನ 11 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಜಿಲ್ಲಾಧಿಕಾರಿ ಸೂಚನೆಗಳೇನು? ಇಲ್ಲಿದೆ ಹೈಲೈಟ್ಸ್‌

POINT-1ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟ ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿಸುವ, ಮಾರಾಟ ಮಾಡುವ ವ್ಯಕ್ತಿ ಅಥವಾ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.

POINT-2ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹ, ಬಣ್ಣಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವಂತಿಲ್ಲ.

ಇದನ್ನೂ ಓದಿ » ಕುವೆಂಪು ವಿಶ್ವವಿದ್ಯಾಲಯಕ್ಕೆ ದೇಶದಲ್ಲೇ 30ನೇ ರ‍್ಯಾಂಕ್‌, ಏನಿದು ರ‍್ಯಾಂಕಿಂಗ್‌? ವಿವಿ ಪಡೆದ ಅಂಕಗಳೆಷ್ಟು?

POINT-3ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸಬೇಕು.

dc-gurudatta-hegde-IAS-Shimoga

POINT-4ಗೌರಿ – ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭ ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳನ್ನು ಪ್ರತ್ಯೇಕಿಸಬೇಕು. ಅವುಗಳನ್ನು ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ, ಪ್ರತ್ಯೇಕವಾಗಿ ವಿಲೇವಾರಿ ಮಾಡಬೇಕು.

POINT-5ಸಾರ್ವಜನಿಕವಾಗಿ ಪ್ರತಿಷ್ಠಾಪಿಸುವ ಗಣೇಶ ವಿಗ್ರಹಗಳನ್ನು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗಳೊಪಟ್ಟ ಅನುಮತಿ ಪಡೆದ ನಂತರವೇ ಸ್ಥಾಪಿಸಬೇಕು. ಏಕಬಳಕೆ ಪ್ಲಾಸ್ಟಿಕ್ ಉಪಯೋಗಿಸುವುದು ನಿಷೇಧಿಸಲಾಗಿದೆ.  

POINT-6ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕ ಬಳಕೆ ನಿಷೇಧಿಸಿದೆ. ಹಸಿರು ಪಟಾಕಿಗಳ ಹೊರತಾಗಿ ಯಾವುದೇ ಪಟಾಕಿ ಸುಡುವುದು ನಿಷೇಧಿಸಲಾಗಿದೆ.

POINT-7ಗಣೇಶ ಮೂರ್ತಿಯ ವಿಸರ್ಜನೆ ಸಂದರ್ಭದಲ್ಲಿ ತೆಪ್ಪ ಬಳಕೆ ಮಾಡಿದ್ದಲ್ಲಿ ಎರಡರಿಂದ ಮೂರು ಜನರಿಗೆ ಮಾತ್ರ ತೆಪ್ಪದಲ್ಲಿ ಹೋಗಲು ಅವಕಾಶ. ಕಡ್ಡಾಯವಾಗಿ ಲೈಫ್ ಜಾಕೇಟ್ ಬಳಸಿ ನುರಿತ ಈಜುಗಾರರ ಸಮ್ಮುಖದಲ್ಲಿ ಗಣಪತಿ ವಿಸರ್ಜಿಸಬೇಕು.

POINT-8ಆ.27 ರಿಂದ ಸೆ.15ರವರೆಗೆ ಜಿಲ್ಲಾದ್ಯಂತ ಬೈಕ್ ರ‍್ಯಾಲಿ, ಡಿ.ಜಿ. ಸಿಸ್ಟಂ ಬಳಕೆ ಹಾಗೂ ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

Guidelines for ganesh chaturthi in Shimoga district. 

Leave a Comment