ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಆಗಸ್ಟ್ 2020
ಕರೋನ ಪಾಸಿಟಿವ್ ಬಂದ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಎಂಎಸ್ಐಎಲ್ ಅಧ್ಯಕ್ಷ, ಸಾಗರ ಶಾಸಕ ಹರತಾಳು ಹಾಲಪ್ಪ ಗುಣವಾಗಿದ್ದಾರೆ. ಇವತ್ತು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಎಂಎಸ್ಐಎಲ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸದ ಬಳಿಕ ಹಾಲಪ್ಪ ಅವರು ಬೆಂಗಳೂರಿನಲ್ಲಿಯೇ ಇದ್ದರು. ಸೋಂಕು ತಗುಲಿರುವುದು ತಿಳಿಯುತ್ತಿದ್ದಂತೆ ಶಿವಾನಂದ ಸರ್ಕಲ್ ಸಮೀಪದ ಮಲ್ಲಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂಬಂಧ ಆಗಸ್ಟ್ 4ರಂದು ಫೇಸ್ಬುಕ್ನಲ್ಲಿ ಪೋಸ್ಟ್ ಪ್ರಕಟಿಸಿದ್ದ ಹಾಲಪ್ಪ ಅವರು, ತಮ್ಮೊಂದಿಗೆ ಸಂಪರ್ಕದಲ್ಲಿ ಇರುವವರು ಕ್ವಾರಂಟೈನ್ಗೆ ಒಳಗಾಗುವಂತೆ ಮನವಿ ಮಾಡಿದ್ದರು.
ಇವತ್ತು ಹಾಲಪ್ಪ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಹಾಗಾಗಿ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮಲ್ಲಿಗೆ ಆಸ್ಪತ್ರೆ ಮುಖ್ಯಸ್ಥರು ಹಾಲಪ್ಪ ಅವರಿಗೆ ಹೂಗುಚ್ಛ ನೀಡಿ ಬೀಳ್ಕೊಟ್ಟರು. ಅದರ ವಿಡಿಯೋ ರಿಪೋರ್ಟ್ ಇಲ್ಲಿದೆ.
https://www.facebook.com/liveshivamogga/videos/317630146259496/?t=0
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]