ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
HOSANAGARA, 30 JULY 2024 : ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ (Heavy Rain). ಬಿಡುವು ನೀಡದೆ ಮಳೆ ಸುರಿಯುತ್ತಿದ್ದು ಜನರಲ್ಲಿ ಆತಂಕ ಮೂಡಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ನಗರದಲ್ಲಿ ನಿರಂತರ ಮಳೆ
ನಗರ ಭಾಗದಲ್ಲಿ ಮಳೆ ಅಬ್ಬರ ಜೋರಾಗಿದೆ. ಬೆಳಗ್ಗೆಯಿಂದ ಎಡೆಬಿಡದೆ ಮಳೆಯಾಗುತ್ತಿದೆ. ಇದರಿಂದ ತಗ್ಗು ಪ್ರದೇಶದ ಜನರಲ್ಲಿ ಭಯ ಆವರಿಸಿದೆ. ಜನರು ಮನೆಯಿಂದ ಹೊರ ಬರಲಾಗದಷ್ಟು ರಭಸವಾಗಿ ಮಳೆ ಸುರಿಯುತ್ತಿದೆ. ನಗರ ಹೋಬಳಿ ಸದ್ಯ ನೆರೆಗೆ ತುತ್ತಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ದ್ವೀಪದಂತಾದ ಮನೆ, ದೇಗುಲ ಜಲಾವೃತ
ನಗರ ಭಾಗದಲ್ಲಿ ಭಾರಿ ಮಳೆಯಿಂದಾಗಿ ಮನೆಗಳು, ದೇವಸ್ಥಾನ ಜಲಾವೃತವಾಗಿವೆ. ನಗರ ಭಾಗದ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನ ಜಲಾವೃತವಾಗಿದೆ. ಸಂಡೋಡಿಯಲ್ಲಿ ಕಿರು ಸೇತುವೆ ಮುಳುಗಿದೆ. ವಿವಿಧೆಡೆ ಮನೆಗಳು, ತೋಟಗಳಿಗೆ ನೀರು ನುಗ್ಗಿದ್ದು ಅಪಾರ ಹಾನಿ ಉಂಟಾಗಿದೆ.
ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಭಾರಿ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜು.31ರಂದು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ರಶ್ಮೀ ಹಾಲೇಶ್ ರಜೆ ಘೋಷಿಸಿದ್ದಾರೆ.