ಶಿವಮೊಗ್ಗ: ಜಿಲ್ಲೆಯಾದ್ಯಂತ ಕಳೆದ ಎರಡು ದಿನದಿಂದ ಭಾರಿ ಮಳೆಯಾಗುತ್ತಿದೆ (rainfall). ವಿವಿಧೆಡೆ ರಾತ್ರಿಯು ಜೋರು ಮಳೆಯಾಗಿದೆ. ಇವತ್ತೂ ಮಳೆ ಅಬ್ಬರಿಸುವ ಸಾಧ್ಯತೆ ಇದೆ ಎಂದ ಹವಾಮಾನ ಇಲಾಖೆ ಎಚ್ಚರಿಸಿದೆ. ಅಲ್ಲದೆ ಇಂದು ಆರೆಂಜ್ ಅಲರ್ಟ್ ಘೋಷಿಸಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದಲ್ಲಿ ಇವತ್ತು ಭಾರಿ ಮಳೆ ಮತ್ತು ತೀವ್ರ ಮೇಲ್ಮೈ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಶಾಲೆ, ಕಾಲೇಜುಗಳಿಗೆ ರಜೆ
ತೀವ್ರ ಮಳೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ತಾಲೂಕು ತಹಶೀಲ್ದಾರ್‌ಗಳು ಆದೇಶಿಸಿದ್ದಾರೆ. ಶಿವಮೊಗ್ಗ, ತೀರ್ಥಹಳ್ಳಿಯಲ್ಲಿ ಕಾಲೇಜುಗಳಿಗು, ಭದ್ರಾವತಿ, ಶಿಕಾರಿಪುರದಲ್ಲಿ ಪಿ.ಯು. ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ » ಸಿಗಂದೂರು ದೇಗುಲದ ಭಕ್ತರಿಗೆ ಗುಡ್ ನ್ಯೂಸ್, ಇನ್ಮುಂದೆ ದರ್ಶನದ ಸಮಯ ಹೆಚ್ಚಳ
ತಂಪು ತಂಪು ವಾತಾವರಣ
ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ವಾತಾವರಣ ತಂಪಾಗಿದೆ. ಶಿವಮೊಗ್ಗ, ಭದ್ರಾವತಿಯಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





