ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ ಮತ್ತೆ ವಿಸ್ತರಣೆ, ಎಷ್ಟು ದಿನ? ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ | ಆಗುಂಬೆ ಘಾಟಿಯಲ್ಲಿ (AGUMBE GHAT) ಭಾರಿ ವಾಹನ (HEAVY VEHICLE) ಸಂಚಾರ ನಿಷೇಧದ ಆದೇಶವನ್ನು ಇನ್ನೂ ಒಂದು ತಿಂಗಳು ವಿಸ್ತರಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿ (DC) ಡಾ. ಆರ್.ಸೆಲ್ವಮಣಿ (Dr.SELVAMANI) ಅವರು ಆದೇಶ ಹೊರಡಿಸಿದ್ದಾರೆ.

SHREYANKA-SHRADANJALI.jpg

ಆಗುಂಬೆ ಭಾಗದಲ್ಲಿ ಜೋರು ಮಳೆಯಾಗುತ್ತಿತ್ತು. ಘಾಟಿಯ 11ನೇ ತಿರುವಿನಲ್ಲಿ ಭೂ ಕುಸಿತ (LAND SLIDE) ಉಂಟಾಗಿತ್ತು. ಈ ಹಿನ್ನೆಲೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಲಾಗಿತ್ತು. ಆಗಸ್ಟ್ 31ರವರೆಗೆ ಈ ನಿಷೇಧ ವಿಧಿಸಲಾಗಿತ್ತು. ಆದರೆ ಈ ಭಾಗದಲ್ಲಿ ಮಳೆ ಮುಂದುವರೆದಿದೆ. ಅಲ್ಲದೆ ಭೂ ಕುಸಿತದ ಸಾದ್ಯತೆಯು ಇದೆ. ಹಾಗಾಗಿ ಭಾರೀ ವಾಹನ ಸಂಚಾರ ನಿಷೇಧವನ್ನು ವಿಸ್ತರಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಇಂಜಿನಿಯರ್ ಅವರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದರು.

ನಿಷೇಧ ಮತ್ತೆ ವಿಸ್ತರಣೆ

ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧದ ಆದೇಶವನ್ನು ವಿಸ್ತರಿಸಲಾಗಿದೆ. ಸೆಪ್ಟೆಂಬರ್ 30ರವರೆಗೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.

ಸದ್ಯ ಘಾಟಿಯಲ್ಲಿ ಲಘು ವಾಹನಗಳು ಮತ್ತು ಬಸ್ಸುಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗಿದೆ. ಭಾರೀ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.

Shimoga Nanjappa Hospital

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೋನಿಗೆ ಬಿತ್ತು ಚಿರತೆ, ನಿಟ್ಟುಸಿರು ಬಿಟ್ಟರು ಜನ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment