ಶಿವಮೊಗ್ಗ: ಜಿಲ್ಲೆಯಲ್ಲಿ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಒಳಪಡದ ಕುಟುಂಬಗಳು ಹಾಗೂ ಸದಸ್ಯರು ಸಮೀಕ್ಷೆಗೆ ಒಳಗೊಳ್ಳಲು ಆಯಾ ತಾಲ್ಲೂಕಿನಲ್ಲಿ ಸಹಾಯವಾಣಿ (Helpline) ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷಾ ಕಾರ್ಯ ಪ್ರಗತಿಯಲಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೂ ಶೇ.85ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ. ರಾಜ್ಯ ಸರ್ಕಾರದ ಆದೇಶದಂತೆ ನಿಗದಿತ ಕಾಲಮಿತಿಯಲ್ಲಿ ಸಮೀಕ್ಷೆ ಪೂರ್ಣಗೊಳ್ಳಲಿದೆ. ಇನ್ನೂ ಹಲವು ಕುಟುಂಬ ಸಮೀಕ್ಷೆಗೆ ಒಳಪಟ್ಟಿಲ್ಲ.
ಸಮೀಕ್ಷೆಗೆ ಒಳಪಟ್ಟಿರುವ ಮನೆಗಳಲ್ಲಿ ಕುಟುಂಬದ ಸದಸ್ಯರು ಸಹಿತ ಹೊರಗೆ ಉಳಿದಿರುವುದು ಕಂಡು ಬಂದಿದೆ. ಆದ್ದರಿಂದ ಸಮೀಕ್ಷೆಗೆ ಒಳಪಡದ ಕುಟುಂಬಗಳು ಹಾಗೂ ಸದಸ್ಯರು ಸಮೀಕ್ಷೆಗೆ ಒಳಗೊಳ್ಳಲು ಸಹಾಯವಾಣಿಯನ ತೆರೆಯಲಾಗಿದೆ.

ಆಯಾ ತಾಲ್ಲೂಕಿಗೆ ಸಂಬಂಧಿಸಿದ ದೂರವಾಣಿ ಸಂಖ್ಯೆ: ಶಿವಮೊಗ್ಗ -08182-279312, ಭದ್ರಾವತಿ -89043 25166, ಶಿಕಾರಿಪುರ -7795352158, ಸಾಗರ -08183-298014, ಸೊರಬ – 96110 97690, ತೀರ್ಥಹಳ್ಳಿ – 99010 88210 / 94810 75115, ಹೊಸನಗರ – 97416 21135 ಗಳನ್ನು ಸಂಪರ್ಕಿಸಿ ತಮ್ಮ ವಾಸ ಸ್ಥಳದ ವಿವರ ನೀಡಿದಲ್ಲಿ ಗಣತಿದಾರರು ತಮ್ಮ ಮನೆಗೆ ಬಂದು ಸಮೀಕ್ಷೆ ಕಾರ್ಯ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದ ಉದ್ಯಮಿಯ ಖಾತೆಗೆ ಪ್ರತಿ ದಿನ ₹200 ಹಣ ಬಂತು, 60 ದಿನ ಆದ್ಮೇಲೆ ಕಾದಿತ್ತು ಆಘಾತ, ಆಗಿದ್ದೇನು?
Helpline
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





