ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 FEBRUARY 2023
SHIMOGA | ಶರಾವತಿ ಸಂತ್ರಸ್ತರಿಗೆ (SHARAVATHI ISSUE) ಭೂಮಿ ಹಕ್ಕು ನೀಡುವ ಕುರಿತು ಕೇಂದ್ರ ಸರ್ಕಾರಕ್ಕೆ ಇವತ್ತೆ ಪ್ರಸ್ತಾವನೆ ಕಳುಹಿಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶರಾವತಿ ಸಂತ್ರಸ್ತರ (SHARAVATHI ISSUE) ಸಮಸ್ಯೆ ಪರಿಹಾರ ಸಂಬಂಧ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ಬಳಿಕ ಯಡಿಯೂರಪ್ಪ ಅವರು ಹೇಳಿಕೆ ನೀಡಿದ್ದಾರೆ.

ಉನ್ನತ ಮಟ್ಟದ ಸಭೆ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಯಿತು. ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಕೆ.ಬಿ.ಅಶೋಕ್ ನಾಯ್ಕ್, ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೇರಿದಂತೆ ಹಲವರು ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಇವತ್ತೆ ಕೇಂದ್ರಕ್ಕೆ ಪ್ರಪೋಸಲ್
ಸಭೆ ಬಳಿಕ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಶರಾವತಿ ಸಂತ್ರಸ್ತರಿಗೆ ತಾವು ಉಳುಮೆ ಮಾಡುವ ಜಮೀನು ಹಕ್ಕು ನೀಡುವುದು 60 ವರ್ಷದ ಸಮಸ್ಯೆಯಾಗಿತ್ತು. ಈ ಸಂಬಂಧ ಕೇಂದ್ರ ಅರಣ್ಯ ಸಚಿವರನ್ನು ಭೇಟಿಯಾದಾಗ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದರು. ಈಗಾಗಲೇ ಜಿಲ್ಲಾಡಳಿತ ಸರ್ವೆ ಕಾರ್ಯ ನಡೆಸಿ ಪ್ರಸ್ತಾವನೆ ಸಿದ್ಧಪಡಿಸಿದೆ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ವಿಚಾರ, ಮತ್ತೆ ಶುರುವಾಯ್ತು ಪ್ರತಿಭಟನೆಗಳು, ಆಗ್ರಹ
ಸುಮಾರು 9 ಸಾವಿರ ಎಕರೆ ಜಮೀನು ಹಕ್ಕು ನೀಡುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುತ್ತೇವೆ. ಇವತ್ತೆ ಪ್ರಸ್ತಾವನೆ ಕಳುಹಿಸಲಾಗುತ್ತದೆ. ಇದರಿಂದ 11 ರಿಂದ 12 ಸಾವಿರ ಕುಟುಂಬಗಳಿಗೆ ಅನುಕೂಲ ಆಗಲಿದೆ ಎಂದು ಯಡಿಯೂರಪ್ಪ ಅವರು ತಿಳಿಸಿದರು.

[su_divider text=”Shivamogga Live | Whatsapp7411700200″ divider_color=”#000000″ link_color=”#000000″]
[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















