ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 27 DECEMBER 2024
ಬೆಂಗಳೂರು : ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಇವತ್ತು ರಾಜ್ಯಾದ್ಯಂತ ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ (Holiday) ಘೋಷಿಸಿ ಆದೇಶಿಸಲಾಗಿದೆ. ಇನ್ನು ರಾಜ್ಯದಲ್ಲಿ ಜನವರಿ 1ರವರೆಗೆ ಶೋಕಾಚರಣೆಗೆ ಸರ್ಕಾರ ಆದೇಶಿಸಿದೆ.
ಡಿಸೆಂಬರ್ 27ರಂದು ಎಲ್ಲ ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ಡಿಸೆಂಬರ್ 26 ರಿಂದ ಜನವರಿ 1ರವರೆಗೆ ಒಟ್ಟು ಏಳು ದಿನ ಶೋಕಾಚರಣೆ ಇರಲಿದೆ. ಈ ಅವಧಿಯಲ್ಲಿ ಸಾರ್ವಜನಿಕ ಮನೋರಂಜನೆ ಕಾರ್ಯಕ್ರಮಗಳು ನಡೆಸುವಂತಿಲ್ಲ. ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಬೇಕು ಎಂದು ಸರ್ಕಾರದ ಉಪ ಕಾರ್ಯದರ್ಶಿ ಎಲಿಷ ಆಂಡ್ರೋಸ್ ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಹೊಸ ವರ್ಷಾಚರಣೆ, ಶಿವಮೊಗ್ಗ ಪೊಲೀಸರಿಂದ ಮಹತ್ವದ ಮೀಟಿಂಗ್, 8 ಪಾಯಿಂಟ್ ಸೂಚನೆ, ಏನದು?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422