ಶಿವಮೊಗ್ಗ ಲೈವ್
ಶಿವಮೊಗ್ಗ: ಜಿಲ್ಲೆಯಲ್ಲಿ ಇವತ್ತೂ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನೆಲೆ ಶಿವಮೊಗ್ಗ ಜಿಲ್ಲೆಗೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ವಿವಿಧ ತಾಲೂಕುಗಳಲ್ಲಿ ರಜೆ
ಭಾರಿ ಮಳೆ ಹಿನ್ನೆಲೆ ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕಿನ ಅಂಗನವಾಡಿಗಳು, ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹೊಸನಗರ ತಾಲೂಕಿನಲ್ಲಿ ಮಾತ್ರ ಪಿ.ಯು ಕಾಲೇಜಿನ ತನಕ ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರ್‌ಗಳು ಆದೇಶ ಹೊರಡಿಸಿದ್ದಾರೆ. ಸೊರಬ ತಾಲೂಕಿನಲ್ಲಿ ಅಂಗನವಾಡಿಗಳು, ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.
