ಶಿವಮೊಗ್ಗ ಲೈವ್.ಕಾಂ | SHIMOGA | 8 ನವೆಂಬರ್ 2019
ಅಯೋಧ್ಯೆ ವಿವಾದ ಕುರಿತು ಸುಪ್ರಿಂಕೋರ್ಟ್ ನಾಳೆ ತೀರ್ಪು ನೀಡಲಿದೆ. ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ರಾಜ್ಯಾದ್ಯಂತ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ಈ ಕುರಿತು ಸಚಿವರು ತಮ್ಮ ಅಧಿಕೃತ ಫೇಸ್’ಬುಕ್ ಮತ್ತು ಟ್ವಿಟರ್’ನಲ್ಲಿ ಹೇಳಿಕೆ ಪ್ರಕಟಿಸಿದ್ದಾರೆ.
ಇನ್ನು, ನವೆಂಬರ್ 9ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕುವೆಂಪು ವಿಶ್ವವಿದ್ಯಾಲಯ ತಿಳಿಸಿದೆ. ವಿವಿ ವ್ಯಾಪ್ತಿಗೆ ಒಳಪಡುವ ಬಿ.ಎಡ್ ಸೇರಿದಂತೆ ಎಲ್ಲ ಪದವಿ ಕಾಲೇಜುಗಳ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುತ್ತದೆ ಎಂದು ಪರೀಕ್ಷಾಂಗ ಕುಲಸಚಿವ ವೆಂಕಟೇಶ್ವರುಲು ಅವರು ತಿಳಿಸಿದ್ದಾರೆ ಎಂದು ಕುವೆಂಪು ವಿವಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಸತ್ಯಪ್ರಕಾಶ್ ತಿಳಿಸಿದ್ದಾರೆ.
ಮತ್ತೊಂದೆಡೆ ಅಯೋಧ್ಯೆ ವಿವಾದದ ತೀರ್ಪು ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮೆಸೇಜುಗಳನ್ನ ಫಾರ್ವಡ್ ಮಾಡುವಾಗ ಎಚ್ಚರ ವಹಿಸಬೇಕು. ಕೋಮು ಸೌಹಾರ್ದತೆ ಕದಡುವಂತ ಮೆಸೇಜುಗಳನ್ನು ಕಳುಹಿಸಿದರೆ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200